ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ

Updated on: Feb 28, 2026 | 1:01 PM

ನಟ ದರ್ಶನ್ ಅವರು ಸದ್ಯ ಜೈಲಿನಲ್ಲ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಆರೋಪ ಕೇಳಿ ಬಂದಿದೆ. ಅದರಲ್ಲಿ ಪೊಲೀಸರು ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದು ಕೂಡ ಒಂದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಪ್ರತಿ ಭಟನೆ ನಡೆಸಲು ಸಿದ್ಧಮಾಡಿಕೊಳ್ಳಲಾಗಿದೆ.

ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ ಆಗ್ರಹ ಕೇಳಿ ಬಂದಿದೆ. ರೇಣುಕಾಸ್ವಾಮಿ‌ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಇವರು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾಹಿತಿ ನೀಡಿದ್ದಾರೆ. ಅವರು ನೀಡಿದ ವಿವರಣೆ ಮೇಲಿನ ವಿಡಿಯೋದಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 28, 2026 01:00 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More