ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದ ರಾಜ್ಯ ಬಿಜೆಪಿ ನಿಯೋಗ
ಬಿಜೆಪಿ ನಿಯೋಗದಲ್ಲಿ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಅಸೆಂಬ್ಲಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ, ಪರಿಷತ್ನಲ್ಲಿ ವಿಪಕ್ಷ ನಾಯಕ ನಾರಾಯಣಸ್ವಾಮಿ ಚಲವಾದಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ, ಜಿಲ್ಲೆಉ ಬಿಜೆಪಿ ಶಾಸಕರು ಮತ್ತು ಇನ್ನೂ ಹಲವಾರು ನಾಯಕರು ಇದ್ದರು. ಜಿಲ್ಲಾಧಿಕಾರಿ ಜೊತೆ ಪೊಲೀಸ್ ಕಮೀಶನರ್ ಮತ್ತು ಎಸ್ಪಿ ಇದ್ದರು.
ಮಂಗಳೂರು, ಜೂನ್ 9: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಪಕ್ಷದ ನಿಯೋಗವೊಂದು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲಿನ್ ಎಂಪಿ (Mullai Muhilin MP) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಪ್ರಜಾಸೌಧದಲ್ಲಿ ಬಿಜೆಪಿ ಧುರೀಣರು ಮತ್ತು ಅಧಿಕಾರಿಗಳ ನಡುವೆ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳ ಮೇಲೆ ಚರ್ಚೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದಿರುವ ಅಪರಾಧಿಕ ವಿದ್ಯಮಾನಗಳು, ಸ್ಥಳೀಯ ಬಿಜೆಪಿ ಮುಖಂಡರ ವಿರುದ್ಧ ಆಗಿರುವ ಎಫ್ಐಅರ್ ಮತ್ತು ಗಡೀಪಾರಿನ ಆದೇಶ ಮೊದಲಾದ ಸಂಗತಿಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಹದ್ದುಮೀರಿದರೆ ಅದಕ್ಕೆ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ