ಊರುಗೋಲಿನ ಸಹಾಯದಿಂದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ

ಮುಡಾ ಸೈಟ್ ಹಗರಣ ಖಂಡಿಸಿ ಇಂದು(ಶನಿವಾರ) ಬಿಜೆಪಿ, ಜೆಡಿಎಸ್​ನಿಂದ​​ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೊದಲ ದಿನ 16 ಕಿ.ಮೀ ಪಾದಯಾತ್ರೆ ನಡೆಸಿ ಮುಕ್ತಾಯಗೊಳಿಸಿದ್ದಾರೆ. ಈ ವೇಳೆ ಊರುಗೋಲಿನ ಸಹಾಯದಿಂದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಹೆಜ್ಜೆ ಹಾಕಿದ್ದು, ವಿಡಿಯೋ ವೈರಲ್ ಆಗಿದೆ.

ಊರುಗೋಲಿನ ಸಹಾಯದಿಂದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
|

Updated on: Aug 03, 2024 | 6:45 PM

ಬೆಂಗಳೂರು, ಆ.03: ಮುಡಾ ಸೈಟ್ ಹಗರಣ ಖಂಡಿಸಿ ಇಂದು(ಶನಿವಾರ) ಬಿಜೆಪಿ, ಜೆಡಿಎಸ್​ನಿಂದ​​ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೊದಲ ದಿನ 16 ಕಿ.ಮೀ ಪಾದಯಾತ್ರೆ ನಡೆಸಿ ಮುಕ್ತಾಯಗೊಳಿಸಿದ್ದಾರೆ. ಮೊದಲ ದಿನದ ಪಾದಯಾತ್ರೆ ಅಂತ್ಯಕ್ಕೂ ಮುನ್ನ ಸಾರ್ವಜನಿಕ ಸಭೆ ನಡೆಸಿ ತೆರೆದ ವಾಹನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಸಾರ್ವಜನಿಕ ಭಾಷಣ ಮಾಡಿದರು. ಇನ್ನು ಊರುಗೋಲಿನ ಸಹಾಯದಿಂದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಹೆಜ್ಜೆ ಹಾಕಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶಗಳನ್ನು ಹಂಚಲಾಗಿದೆ ಎಂಬ ಆರೋಪ ಬಿಜೆಪಿ, ಜೆಡಿಎಸ್‌ಗೆ ಬ್ರಹ್ಮಾಸ್ತ್ರವಾಗಿದ್ದು, ಇಂದು ಮೊದಲ ದಿನದ ಪಾದಯಾತ್ರೆ ಅಂತ್ಯವಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us