Video: ಡ್ರೈವರ್ ಇಲ್ಲ, ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದೆ ಹೋದ ವಾಹನ, ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡ ಪ್ರಯಾಣಿಕರು

Updated on: Dec 18, 2025 | 7:16 AM

ಹಿಮಾಚಲ ಪ್ರದೇಶದ ಜನಪ್ರಿಯ ಗಿರಿಧಾಮ ಡಾಲ್ಹೌಸಿಯಲ್ಲಿ ಬುಧವಾರ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಾಹನವು ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದಕ್ಕೆ ಹೋಗಿತ್ತು. ವಾಹನ ಚಲಿಸಲು ಪ್ರಾರಂಭಿಸಿದಾಗ ಚಾಲಕ ವಾಹನದೊಳಗೆ ಇರಲಿಲ್ಲ, ಇದರಿಂದಾಗಿ ಪ್ರಯಾಣಿಕರು ಭಯಭೀತರಾದರು, ಅವರು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಚಲಿಸುತ್ತಿದ್ದ ಕಾರಿನಿಂದ ಜಿಗಿದಿದ್ದಾರೆ. ಸ್ವಲ್ಪ ದೂರ ಹೋದ ವಾಹನ ಮರಕ್ಕೆ ಡಿಕ್ಕಿಯಾಗಿ ನಿಂತಿತ್ತು, ವಾಹನದಲ್ಲೇ ಇದ್ದವರು ಕೆಲವರು ಕೆಳಗೆ ಬಿದ್ದರು. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಜೀವಹಾನಿ ಅಥವಾ ಗಂಭೀರ ಗಾಯಗಳಾಗಿಲ್ಲ.

ಹಿಮಾಚಲ ಪ್ರದೇಶ, ಡಿಸೆಂಬರ್ 18: ಹಿಮಾಚಲ ಪ್ರದೇಶದ ಜನಪ್ರಿಯ ಗಿರಿಧಾಮ ಡಾಲ್ಹೌಸಿಯಲ್ಲಿ ಬುಧವಾರ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಾಹನವು ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದಕ್ಕೆ ಹೋಗಿತ್ತು. ವಾಹನ ಚಲಿಸಲು ಪ್ರಾರಂಭಿಸಿದಾಗ ಚಾಲಕ ವಾಹನದೊಳಗೆ ಇರಲಿಲ್ಲ, ಇದರಿಂದಾಗಿ ಪ್ರಯಾಣಿಕರು ಭಯಭೀತರಾದರು, ಅವರು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಚಲಿಸುತ್ತಿದ್ದ  ವಾಹನದಿಂದ ಜಿಗಿದಿದ್ದಾರೆ. ಸ್ವಲ್ಪ ದೂರ ಹೋದ ವಾಹನ ಮರಕ್ಕೆ ಡಿಕ್ಕಿಯಾಗಿ ನಿಂತಿತ್ತು, ವಾಹನದಲ್ಲೇ ಇದ್ದವರು ಕೆಲವರು ಕೆಳಗೆ ಬಿದ್ದರು. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಜೀವಹಾನಿ ಅಥವಾ ಗಂಭೀರ ಗಾಯಗಳಾಗಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More