ರಸ್ತೆ ಗುಂಡಿಗೆ ಸಿಲುಕಿ ಉರುಳಿ ಬಿದ್ದ ಕ್ಯಾಂಟರ್ ವಾಹನ; ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ಟ್ರಾಫಿಕ್ ಜಾಮ್

ಬಿ ಮೂರ್ತಿ, ನೆಲಮಂಗಲ Edited By: ಕಿರಣ್ ಹನುಮಂತ್​ ಮಾದಾರ್

Updated on: Dec 02, 2023 | 10:03 PM

ಕ್ಯಾಂಟರ್ ವಾಹನವೊಂದು ರಸ್ತೆ ಗುಂಡಿಗೆ ಸಿಲುಕಿ ರಸ್ತೆಯಲ್ಲೇ ಉರುಳಿ ಬಿದ್ದು ಬೆಂಗಳೂರಿನ(Bengaluru) ಅಂದ್ರಹಳ್ಳಿಯಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದೆ. ಈ ಕ್ಯಾಂಟರ್(Canter) ವೈಟ್ ಸಿಮೆಂಟ್ ಚೀಲ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಯದಿಂದ ಪಾರಾಗಿದ್ದು,  ಕ್ರೇನ್ ಬಳಸಿ ಉರುಳಿ ಬಿದ್ದ ಕ್ಯಾಂಟರ್​ನ್ನು ಮೇಲಕ್ಕೆ ಎತ್ತಲಾಗಿದೆ.

ಬೆಂಗಳೂರು, ಡಿ.02: ಕ್ಯಾಂಟರ್ ವಾಹನವೊಂದು ರಸ್ತೆ ಗುಂಡಿಗೆ ಸಿಲುಕಿ ರಸ್ತೆಯಲ್ಲೇ ಉರುಳಿ ಬಿದ್ದು ಬೆಂಗಳೂರಿನ(Bengaluru) ಅಂದ್ರಹಳ್ಳಿಯಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದೆ. ಈ ಕ್ಯಾಂಟರ್(Canter) ವೈಟ್ ಸಿಮೆಂಟ್ ಚೀಲ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಯದಿಂದ ಪಾರಾಗಿದ್ದು,  ಕ್ರೇನ್ ಬಳಸಿ ಉರುಳಿ ಬಿದ್ದ ಕ್ಯಾಂಟರ್​ನ್ನು ಮೇಲಕ್ಕೆ ಎತ್ತಲಾಗಿದೆ. ಈ ಹಿನ್ನಲೆ ಕೆಲಕಾಲ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಬ್ಯಾಡರಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,