ದೇವನಹಳ್ಳಿ: ಏರ್ಪೋರ್ಟ್ ಫ್ಲೈ ಓವರ್ ಮೇಲೆ ಕಾರು, ಬೈಕ್​ ಭೀಕರ ಅಪಘಾತ; ದೃಶ್ಯ ಕಾರಿನ ಕ್ಯಾಮೆರಾದಲ್ಲಿ ಸೆರೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 27, 2023 | 3:37 PM

ದೇವನಹಳ್ಳಿ ಕಡೆಯಿಂದ ಏರ್ಪೋರ್ಟ್​ನತ್ತ ಹೋಗುತ್ತಿದ್ದ ಬೈಕ್ ಮತ್ತು ಕಾರು. ಈ ವೇಳೆ ಏಕಾಏಕಿ ಒಂದು ಪಥದಿಂದ ಮತ್ತೊಂದು ಪಥಕ್ಕೆ ಬೈಕ್ ಬಂದಿದೆ. ಅದೃಷ್ಟವಶಾತ್ ಬೈಕ್​ನಲ್ಲಿದ್ದ ತಾಯಿ, ಮಗು ಹಾಗೂ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕೆಂಪೇಗೌಡ ಸಂಚಾರಿ ಏರ್ಪೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ, ಆ.27: ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಯತಿಗಾನಹಳ್ಳಿ ಬಳಿಯ ಏರ್ಪೋರ್ಟ್ ಫ್ಲೈ ಓವರ್ (Airport Flyover) ಮೇಲೆ ಭೀಕರ ಅಪಘಾತವೊಂದು ನಡೆದಿದೆ. ಚಲಿಸುತ್ತಿದ್ದ ಕಾರಿಗೆ ಅಡ್ಡಲಾಗಿ ಬಂದ ಬೈಕ್​ ಸವಾರನಿಗೆ ವೇಗವಾಗಿ ಬರುತ್ತಿದ್ದ ಕಾರೊಂದು ನೋಡ ನೋಡುತ್ತಿದ್ದಂತೆ ಡಿಕ್ಕಿ ಹೊಡೆದಿದೆ. ಇನ್ನು ಅಪಘಾತದ (Accident)  ಬೀಕರ ದೃಶ್ಯ ಹಿಂದೆ ಬರುತ್ತಿದ್ದ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವನಹಳ್ಳಿ ಕಡೆಯಿಂದ ಏರ್ಪೋರ್ಟ್​ನತ್ತ ಹೋಗುತ್ತಿದ್ದ ಬೈಕ್ ಮತ್ತು ಕಾರು. ಈ ವೇಳೆ ಏಕಾಏಕಿ ಒಂದು ಪಥದಿಂದ ಮತ್ತೊಂದು ಪಥಕ್ಕೆ ಬೈಕ್ ಬಂದಿದೆ. ಅದೃಷ್ಟವಶಾತ್ ಬೈಕ್​ನಲ್ಲಿದ್ದ ತಾಯಿ, ಮಗು ಹಾಗೂ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕೆಂಪೇಗೌಡ ಸಂಚಾರಿ ಏರ್ಪೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More