AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiggaon By Poll Result:ಹತಾಶೆಯೊಂದಿಗೆ ಮತಎಣಿಕೆ ಕೇಂದ್ರದಿಂದ ಹೊರಬಿದ್ದ ಭರತ್ ಬೊಮ್ಮಾಯಿ

Shiggaon By Poll Result:ಹತಾಶೆಯೊಂದಿಗೆ ಮತಎಣಿಕೆ ಕೇಂದ್ರದಿಂದ ಹೊರಬಿದ್ದ ಭರತ್ ಬೊಮ್ಮಾಯಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Nov 23, 2024 | 1:57 PM

Share

ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ತಿಗೆ ಆಯ್ಕೆಯಾಗಿದ್ದರಿಂದ ಶಿಗ್ಗಾವಿಗೆ ಉಪ ಚುನಾವಣೆ ನಡೆಸುವುದು ಅನಿವಾರ್ಯವಾಗಿತ್ತು. ಭರತ್ ಬೊಮ್ಮಯಿಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಬಿಜೆಪಿ ಪಾಳೆಯದಲ್ಲಿ ಅಸಮಾಧಾನ ಉಂಟಾಗಿತ್ತು ಎಂಬ ಮಾತಿದೆ.

ಹಾವೇರಿ: ಚುನಾವಣೆ ಅಂದ ಮೇಲೆ ಸೋಲು ಗೆಲುವು ಇದ್ದಿದ್ದೆ, ಒಬ್ಬರು ಸೋತಾಗಲೇ ಮತ್ತೊಬ್ಬರು ಗೆಲ್ಲೋದು. ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೂಲಕ ಸ್ಪರ್ಧಿಸುವ ರಾಜಕೀಯಕ್ಕೆ ಪ್ರವೇಶ ಮಾಡಿದ್ದ ಸಂಸದ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಸೋತಿದ್ದಾರೆ. ಫಲಿತಾಂಶ ಹೊರಬಿದ್ದ ಬಳಿಕ ಭರತ್ ನಿರಾಶರಾಗಿ ಮತ ಎಣಿಕೆ ಕೇಂದ್ರದಿಂದ ಹೊರಬೀಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅವರ ಮುಖದಲ್ಲಿ ಹತಾಶೆ ಎದ್ದು ಕಾಣುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೋಟಿ ಒಡೆಯ

Published on: Nov 23, 2024 01:57 PM