ನೆಲಮಂಗಲ ಬಳಿ 50 ಸಾವಿರ ರೂ ಹಣದ ಸಮೇತ ಡಸ್ಟರ್ ಕಾರು ಅಗ್ನಿಗಾಹುತಿ

ಬಿ ಮೂರ್ತಿ, ನೆಲಮಂಗಲ Edited By: ಸಾಧು ಶ್ರೀನಾಥ್​

Updated on: Oct 05, 2023 | 5:05 PM

ಬ್ಯಾಟರಿ ಸರ್ಕ್ಯೂಟ್​ ಆಗಿ ಬೆಲೆಬಾಳುವ ಡಸ್ಟರ್ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಗಟನೆ ಸೋಲೂರು ಶ್ರೀರಾಮ ಫೈನಾನ್ಸ್ ಕಚೇರಿ ಬಳಿ ನಡೆದಿದೆ. ಕಿರಣ್ ಗೌಡ ಎಂಬುವರಿಗೆ ಸೇರಿದ ಡಸ್ಟರ್ ಕಾರು (Car Fire) ಬೆಂಕಿಗಾಹುತಿಯಾಗಿದೆ.

ನೆಲಮಂಗಲ (ಬೆಂಗಳೂರು ಗ್ರಾಮಾಂತರ), ಅಕ್ಟೋಬರ್​ 5: ಬ್ಯಾಟರಿ ಸರ್ಕ್ಯೂಟ್​ ಆಗಿ ಬೆಲೆಬಾಳುವ ಡಸ್ಟರ್ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಗಟನೆ ಸೋಲೂರು ಶ್ರೀರಾಮ ಫೈನಾನ್ಸ್ ಕಚೇರಿ ಬಳಿ ನಡೆದಿದೆ. ಕಿರಣ್ ಗೌಡ ಎಂಬುವರಿಗೆ ಸೇರಿದ ಡಸ್ಟರ್ ಕಾರು (Car Fire) ಬೆಂಕಿಗಾಹುತಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕು ವ್ಯಾಪ್ತಿಯಲ್ಲಿವ ಶ್ರೀರಾಮ ಫೈನಾನ್ಸ್​ಗೆ ಹಣ ಕಟ್ಟಲು ಕಿರಣ್ ಗೌಡ ಬಂದಿದ್ದರು. ದುರದೃಷ್ಟವೆಂದರೆ 50 ಸಾವಿರ ರೂಪಾಯಿ ಹಣದ ಸಮೇತ (Money) ಡಸ್ಟರ್ ಕಾರು ಅಗ್ನಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,