ಪ್ರಚಾರದ ತೆವಲಿಗೆ ಕೆಲವರು ಹೇಳಿಕೆ ನೀಡುತ್ತಾರೆ, ಅವಕ್ಕೆಲ್ಲ ಪ್ರತಿಕ್ರಿಯೆ ನೀಡಬೇಕಿಲ್ಲ: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: May 01, 2025 | 1:44 PM

ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಹಿಂದೆ ಕೆಲವರು ವಿಧಾನ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದಾಗ ಅವರನ್ನು ಮಟ್ಟ ಹಾಕಿದ್ದರೆ ಇಂಥ ಘಟನೆಗಳು ಮರುಕಳಿಸುತ್ತಿರಲಿಲ್ಲ, ನಿನ್ನೆ ಮಲ್ಲಿಕಾರ್ಜುನ ಖರ್ಗೆಯವರು ತಾಕೀತು ಮಾಡಿದ ಮೇಲೆ ಕೆಲ ಕಾಂಗ್ರೆಸ್ ನಾಯಕರಿಗೆ ಬುದ್ಧಿ ಬಂದಂತೆ ಕಾಣುತ್ತಿದೆ ಎಂದು ಹೇಳಿದರು.

ಬೆಂಗಳೂರು ಮೇ 1: ಪಹಲ್ಗಾಮ್ ಉಗ್ರರ ದಾಳಿಗೆ (Pahalgam Terror Attack) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಸಚಿವ ಸಂತೋಷ್ ಲಾಡ್ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೆಲವರು ಪ್ರಚಾರದ ತೆವಲಿಗಾಗಿ ಮನಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ, ಅವುಗಳಿಗೆಲ್ಲ ಪ್ರತಿಕ್ರಿಯೆ ನೀಡುವ ಅವಶ್ಯಕತೆಯಿಲ್ಲ, ಆದರೆ ಪಹಲ್ಗಾಮ್​​ನಲ್ಲಿ ಉಗ್ರರ ಕೃತ್ಯ ನಡೆದ ಬಳಿಕ ಪ್ರತಿಯೊಬ್ಬ ಭಾರತೀಯ ಕೇಂದ್ರ ಸರ್ಕಾರಕ್ಕೆ ತನ್ನ ಬೆಂಬಲ ಸೂಚಿಸಿದ್ದಾನೆ ಮತ್ತು ಭಯೋತ್ಪಾದಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಹೇಳುತ್ತಿದ್ದಾನೆ ಎಂದರು.

ಇದನ್ನೂ ಓದಿ:  18 ಶಾಸಕರ ಅಮಾನತು ಪ್ರಶ್ನಿಸಿ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ: ವಿಜಯೇಂದ್ರ ಹೇಳಿದ್ದಿಷ್ಟು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.