ಬಸನಗೌಡ ಯತ್ನಾಳ್ ಕೈ ಬಿಡಬೇಡಿ ಎಂದು ಕೆಲ ಸಂಸದರು ನನಗೆ ಹೇಳಿದ್ದಾರೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ

Updated on: May 01, 2025 | 10:17 AM

ಉತ್ತರ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ಬಸನಗೌಡ ಯತ್ನಾಳ್ ಅವರಿಂದ ಬಹು ದೊಡ್ಡ ಕೊಡುಗೆ ಸಿಗುತ್ತಿದೆ ಮತ್ತು ಮುಂದೆಯೂ ಸಿಗಲಿದೆ, ಯುವಕರನ್ನು ಸಂಘಟಿಸುವ ಕಾರ್ಯದಲ್ಲಿ ಅವರನ್ನು ಮೀರಿಸುವವರಿಲ್ಲ ಎಂದು ಸ್ವಾಮೀಜಿ ಹೇಳಿದರು. ಕರ್ನಾಟಕದ ಜನ ಅದರಲ್ಲೂ ವಿಶೇಷವಾಗಿ ವಿಜಯಪುರ ಮತ್ತು ಉತ್ತರ ಕರ್ನಾಟಕದ ಜನ ಯತ್ನಾಳ್ ಬೆಂಬಲಕ್ಕೆ ನಿಲ್ಲಬೇಕಿದೆ ಎಂದು ಸ್ವಾಮೀಜಿ ಹೇಳಿದರು.

ವಿಜಯಪುರ, ಮೇ 1: ಬುಧವಾರದಂದು ಬಸವ ಜಯಂತಿ ಪ್ರಯುಕ್ತ ವಿಜಯಪುರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತಾಡಿದ ಕೂಡಲಸಂಗಮ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು (Basava Jaya Mrithyunjaya Swamiji) ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹಿಂದೆ ತಾವು ನೈತಿಕ ಬಲವಾಗಿ ನಿಂತಿದ್ದೇನೆ ಎಂದು ಹೇಳಿದರು. ದೆಹಲಿಯಲ್ಲಿ ತಾವು ಭಾಗವಹಿಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕೆಲ ಬಿಜೆಪಿ ಸಂಸದರು ಸಹ ಪಾಲ್ಗೊಂಡಿದ್ದರು, ಮತ್ತು ತಮ್ಮ ಕಿವಿಯಲ್ಲಿ ಯಾವ ಕಾರಣಕ್ಕೂ ಯತ್ನಾಳ್ ರನ್ನು ಬಿಡಬೇಡಿ, ಅವರಿಂದಾಗೇ ಬಿಜೆಪಿ ಕರ್ನಾಟಕದಲ್ಲಿ ಗೆದ್ದು ಅಧಿಕಾರಕ್ಕೆ ಬರಲು ಸಾಧ್ಯ ಎಂದು ಹೇಳಿದರು ಎಂದು ಸ್ವಾಮೀಜಿ ಸಭೆಗೆ ತಿಳಿಸಿದರು.

ಇದನ್ನೂ ಓದಿ:  ಯತ್ನಾಳ್ ಬಗ್ಗೆ ಬಹಳ ಕನಸಿಟ್ಟುಕೊಂಡಿದ್ದೆವು, ಅದರೆ ಬಚ್ಚಲು ಬಾಯಿಂದಾಗಿ ಎಲ್ಲ ಹಾಳುಮಾಡಿಕೊಂಡಿದ್ದಾರೆ: ಸ್ವಾಮೀಜಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.