ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

Edited By:

Updated on: Nov 12, 2023 | 3:12 PM

ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿದ್ದು, ಒಂಬತ್ತು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೆಲಮಂಗಲ, ನ.12: ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ (BMTC) ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ಟೌನ್​ನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿದೆ. ಹೌದು, ನೆಲಮಂಗಲದಿಂದ ಮೆಜೆಸ್ಟಿಕ್‌ಗೆ ಸಂಚರಿಸುತ್ತಿದ್ದ ಬಸ್‌ನ ಬ್ಯಾಟರಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಬಸ್‌ ಚಾಲಕ ಸೋಮಶೇಖರ್ ಅವರು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಇನ್ಸ್‌ಪೆಕ್ಟರ್ ಶಶಿಧರ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ