ಸೈಟ್ ವಿವಾದ; ಯಶ್ ತಾಯಿ ಪುಷ್ಪಾಗೆ ಮೊದಲ ಹಂತದ ಜಯ
ಯಶ್ ತಾಯಿ ಪುಷ್ಪಾ ಅವರು ಈಗ ಸೈಟ್ ವಿಷಯಕ್ಕೆ ಸುದ್ದಿಯಲ್ಲಿದ್ದಾರೆ. ತಾವು ಖರೀದಿ ಮಾಡಿದ್ದ ಜಾಗವನ್ನು ಮತ್ತೊಬ್ಬರು ತಮ್ಮದು ಎಂದು ಹೇಳಿಕೊಳ್ಳುತ್ತಾ ಬರುತ್ತಿದ್ದಾರೆ. ಈಗ ಸೈಟ್ ವಿಷಯದಲ್ಲಿ ಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರಿಂದ ಸೈಟ್ ವಿವಾದದಲ್ಲಿ ಪುಷ್ಪಾಗೆ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ.
ಯಶ್ ತಾಯಿ ಪುಷ್ಪಾ ಅವರು ಹಾಸನದಲ್ಲಿ ಸೈಟ್ ಒಂದನ್ನು ಖರೀದಿ ಮಾಡಿದ್ದರು. ಇದು ವಿವಾದಕ್ಕೆ ಸಿಲುಕಿತ್ತು. ಲಕ್ಷ್ಮಮ್ಮ ಅನ್ನೋರು ಸೈಟ್ ತಮ್ಮದು ಎಂದು ಹೇಳುತ್ತಿದ್ದಾರೆ. ಈ ವಿಷಯದಲ್ಲಿ ಪುಷ್ಪಾ ಕೋರ್ಟ್ಗೆ ಹೋಗಿದ್ದರು. ಕೋರ್ಟ್ ಅಲ್ಲಿ ಯಶ್ ತಾಯಿಗೆ ಮೊದಲ ಹಂತದ ಗೆಲುವು ಸಿಕ್ಕಿದೆ. ಮೂಲ ದಾವೆಯ ಆದೇಶ ಅನುಷ್ಠಾನಕ್ಕೆ ಕೋರ್ಟ್ ತಡೆ ನೀಡಿದೆ.
ಲಕ್ಷ್ಮಮ್ಮ ಪರವಾಗಿ ಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿದ್ದ ಪುಷ್ಪಾ ಅವರು, ‘ತಮ್ಮನ್ನ ಕಕ್ಷಿದಾರರಾಗಿ ಪರಿಗಣಿಸದೆ ಆದೇಶ ಮಾಡಲಾಗಿದೆ’ ಎಂದು ಕೇಸ್ ದಾಖಲು ಮಾಡಿದ್ದರು. ಈಗ ದಾಖಲಾಗಿರೊ ದಾವೆ ಇತ್ಯರ್ಥ ಆಗೋವರೆಗೂ ವಿವಾದಿತ ಪ್ರಾಪರ್ಟಿಯನ್ನ ಪರವಾರೆ ಅಥವಾ ಮೂಲ ಸ್ವರೂಪ ಬದಲಾವಣೆ ಮಾಡದಂತೆ ಅರ್ಜಿದಾರರಿಗೂ ನಿರ್ಬಂಧ ಹೇರಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಂಗಳೂರಿನ ಎಂಆರ್ಪಿಎಲ್ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

