Rohini Vs Roopa: ರೋಹಿಣಿ ಸಿಂಧೂರಿ ನಿರ್ಮಿಸುತ್ತಿದ್ದಾರೆ ಎಂದು ಡಿ ರೂಪಾ ಆರೋಪ ಮಾಡಿರುವ ಬಂಗ್ಲೆ ಎಲ್ಲಿದೆ, ಹೇಗಿದೆ ಅಂತ ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ

Updated on: Feb 21, 2023 | 12:35 PM

ಮನೆಗೆ ಸಂಬಂಧಿಸಿದಂತೆ ರೂಪಾ ಮಾಡಿರುವ ಆರೋಪಗಳಲ್ಲಿ ಇಟಲಿ ದೇಶದಿಂದ ತರಿಸಿರುವ ಸುಮಾರು ಒಂದು ಕೋಟಿ ರೂಪಾಯಿಗಳಿಗಿಂತ ಹೆಚ್ಚು ಬೆಲೆ ಬಾಳುವ ಫರ್ನೀಚರ್ ಸಹ ಸೇರಿವೆ.

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗೀಲ್ (D Roopa Moudgil) ಅವರು ಐಎಎಸ್ ಅಧಿಕಾರಿ ರೋಹಿಣಿ (Rohini Sindhuri) ವಿರುದ್ಧ ಮಾಡಿರುವ 19 ಆರೋಪಗಳಲ್ಲಿ ಅವರು ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ರಸ್ತೆಯಲ್ಲಿರುವ ಸೆಂಚುರಿ ಆರ್ಟಿಜನ್ ಲೇಔಟ್ ನಲ್ಲಿ ನಿರ್ಮಿಸುತ್ತಿರುವ ಒಂದು ಭವ್ಯ ಬಂಗ್ಲೆಯೂ (bungalow) ಒಂದು. ವಿಡಿಯೋದಲ್ಲಿ ಕಾಣುತ್ತಿರುವ ಮನೆ ರೂಪಾ ಆರೋಪಿಸಿರುವಂಥದ್ದು. ಟಿವಿ9 ವರದಿಗಾರ ಸಂಗ್ರಹಿಸಿರುವ ಮಾಹಿತಿ ಪ್ರಕಾರ ಇಲ್ಲಿ ಪ್ರತಿ ಚದರ ಅಡಿ ಭೂಮಿಯ ಬೆಲೆ ಸುಮಾರು ರೂ. 30 ಸಾವಿರದಷ್ಟಿದೆ. 60X40 ನಿವೇಶನದಲ್ಲಿ ಮನೆಯನ್ನು ನಿರ್ಮಿಸಲಾಗಿದೆ. ಮನೆಗೆ ಸಂಬಂಧಿಸಿದಂತೆ ರೂಪಾ ಮಾಡಿರುವ ಆರೋಪಗಳಲ್ಲಿ ಇಟಲಿ ದೇಶದಿಂದ ತರಿಸಿರುವ ಸುಮಾರು ಒಂದು ಕೋಟಿ ರೂಪಾಯಿಗಳಿಗಿಂತ ಹೆಚ್ಚು ಬೆಲೆ ಬಾಳುವ ಫರ್ನೀಚರ್ ಸಹ ಸೇರಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 21, 2023 12:30 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.