Kolar News: ಗ್ರಾಮದಲ್ಲಿ ಪ್ರತ್ಯಕ್ಷವಾದ 14 ಕಾಡಾನೆಗಳ ಹಿಂಡು: ಜನರಲ್ಲಿ ಆತಂಕ, ಹತ್ತಾರು ಎಕರೆ ಬೆಳೆ ನಾಶ

Kolar News: ಗ್ರಾಮದಲ್ಲಿ ಪ್ರತ್ಯಕ್ಷವಾದ 14 ಕಾಡಾನೆಗಳ ಹಿಂಡು: ಜನರಲ್ಲಿ ಆತಂಕ, ಹತ್ತಾರು ಎಕರೆ ಬೆಳೆ ನಾಶ

ಗಂಗಾಧರ​ ಬ. ಸಾಬೋಜಿ
|

Updated on: May 23, 2023 | 4:26 PM

ಸುಮಾರು 14 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕರವಿರೆಡ್ಡಿಹಳ್ಳಿಯಲ್ಲಿ ನಡೆದಿದೆ.

ಕೋಲಾರ: ಸುಮಾರು 14 ಕಾಡಾನೆಗಳ (wild elephants) ಹಿಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕರವಿರೆಡ್ಡಿಹಳ್ಳಿಯಲ್ಲಿ ನಡೆದಿದೆ. ಕಾಡಾನೆ ಹಿಂಡಿನ ದಾಳಿಯಿಂದ ಹತ್ತಾರು ಎಕರೆ ಬೆಳೆ ನಾಶವಾಗಿದೆ. ಆಂಧ್ರಪ್ರದೇಶದ ಗಡಿಯಿಂದ ಕಾಡಾನೆಗಳ ಹಿಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆಗಳನ್ನು ನೋಡಲು ನೂರಾರು ಜನರು ಜಮಾಯಿಸಿದ್ದು, ಜನರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಆನೆಗಳನ್ನು ಮರಳಿ ಕಾಡಿಗಟ್ಟಲು ಅರಣ್ಯ ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.