ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ (Murder) ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ (Mysuru) ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್ ಪತ್ನಿ ಪುಷ್ಪಾ(26) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಪತಿ ಮಹೇಶ್, ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಮೈಸೂರು, (ಏಪ್ರಿಲ್ 30): ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ (Murder) ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ (Mysuru) ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್ ಪತ್ನಿ ಪುಷ್ಪಾ(26) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಪತಿ ಮಹೇಶ್, ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಮೈಸೂರಿನಲ್ಲಿ ದೇವರಾಜ ಅರಸು ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪಾ,
ಪ್ರತಿದಿನವೂ ಕೆಲಸದಿಂದ ಮನೆಗೆ ತಡವಾಗಿ ಬರುತ್ತಿದ್ದಳು. ಇದರಿಂದ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಪತಿ ಮಹೇಶ್, ಇದೇ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದ. ಇದೇ ಜಗಳ ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
