ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 29, 2024 | 2:54 PM

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಭೀಕರ ಅಪಘಾತ(Accident) ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕೆಎಸ್​​ಆರ್​ಟಿಸಿ ಬಸ್(KSRTC Bus) ಹಳ್ಳಕ್ಕೆ ನುಗ್ಗಿದೆ. ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್​​ಗಳು ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಡ್ಯ, ಜೂ.29: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ(Accident) ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕೆಎಸ್​​ಆರ್​ಟಿಸಿ ಬಸ್(KSRTC Bus) ಹಳ್ಳಕ್ಕೆ ನುಗ್ಗಿದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ನಡೆದಿದೆ. ಡಿವೈಡರ್​ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್‌ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ. ಈ ಘಟನೆಯಲ್ಲಿ ಬಸ್‌ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿತವಾಗಿದೆ. ಗಾಯಾಳುಗಳಿಗೆ ಮಂಡ್ಯ,‌ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್​​ಗಳು ಜಖಂಗೊಂಡಿದೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 29, 2024 02:54 PM