ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಭೀಕರ ಅಪಘಾತ(Accident) ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್(KSRTC Bus) ಹಳ್ಳಕ್ಕೆ ನುಗ್ಗಿದೆ. ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್ಗಳು ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ, ಜೂ.29: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ(Accident) ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್(KSRTC Bus) ಹಳ್ಳಕ್ಕೆ ನುಗ್ಗಿದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ನಡೆದಿದೆ. ಡಿವೈಡರ್ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್‌ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ. ಈ ಘಟನೆಯಲ್ಲಿ ಬಸ್‌ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿತವಾಗಿದೆ. ಗಾಯಾಳುಗಳಿಗೆ ಮಂಡ್ಯ, ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್ಗಳು ಜಖಂಗೊಂಡಿದೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 29, 2024 02:54 PM