ಮೊಬೈಲ್ ನೋಡುತ್ತಲೇ ಬಸ್ ಓಡಿಸಿದ ಚಾಲಕ! ವೈರಲ್ ಆದ ವಿಡಿಯೋ ಇಲ್ಲಿದೆ
ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ಮಹದೇವ ಎಂಬುವವರು ತಮ್ಮ ಮೊಬೈಲ್ನಲ್ಲಿ ದೃಶ್ಯಗಳನ್ನ ಸೆರೆಹಿಡಿದಿದ್ದಾರೆ. ವೈರಲ್ ಆದ ವಿಡಿಯೋ ನೋಡಿದ ಮೇಲೆ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಎಸ್ಆರ್ಟಿಸಿ ಬಸ್ (KSRTC Bus) ಚಾಲಕನೊಬ್ಬ ಮೊಬೈಲ್ ನೋಡುತ್ತಲೇ ಬಸ್ ಚಲಾಯಿಸಿದ್ದಾನೆ. ಬೆಂಗಳೂರಿನಿಂದ ತುಮಕೂರು, ಶಿರಾ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಹಾನಗಲ್ಗೆ ಹೊಗುತ್ತಿತ್ತು. ಈ ವೇಳೆ ಬಸ್ ಚಾಲಕ ಮೊಬೈಲ್ ನೋಡಿಕೊಂಡು ಓಡಿಸಿದ್ದಾನೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಸ್ ಚಲಾಯಿಸುತ್ತಿದ್ದ ವೇಳೆ ಮೊಬೈಲ್ ಬಳಕೆ ಮಾಡಿರುವ ದೃಶ್ಯಗಳನ್ನ ಪ್ರಯಾಣಿಕರು ಸೆರೆಹಿಡಿದಿದ್ದಾರೆ. ಈ ಘಟನೆ ಜನವರಿ 27ಕ್ಕೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ಮಹದೇವ ಎಂಬುವವರು ತಮ್ಮ ಮೊಬೈಲ್ನಲ್ಲಿ ದೃಶ್ಯಗಳನ್ನ ಸೆರೆಹಿಡಿದಿದ್ದಾರೆ. ವೈರಲ್ ಆದ ವಿಡಿಯೋ ನೋಡಿದ ಮೇಲೆ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಪ್ರಯಾಣಿಕ ಮಹದೇವ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ
ಯಾದಗಿರಿಯಲ್ಲಿ ಅಪ್ರಾಪ್ತೆ ಮೇಲೆ ವೃದ್ಧನಿಂದ ಅತ್ಯಾಚಾರಕ್ಕೆ ಯತ್ನ ಆರೋಪ! ಆರೋಪಿ ಅರೆಸ್ಟ್
Latest Videos