Chamrajnagar: ಮಲೆ ಮಹಾದೇಶ್ವರದ ಮಾದಪ್ಪನ ಸನ್ನಿಧಿಯಲ್ಲಿ ಮಹಿಳೆಯರದ್ದೇ ಬಹುಪರಾಕ್​

Chamrajnagar: ಮಲೆ ಮಹಾದೇಶ್ವರದ ಮಾದಪ್ಪನ ಸನ್ನಿಧಿಯಲ್ಲಿ ಮಹಿಳೆಯರದ್ದೇ ಬಹುಪರಾಕ್​

ವಿವೇಕ ಬಿರಾದಾರ
|

Updated on:Jun 18, 2023 | 2:09 PM

ಆಷಾಢ ಅಮವಾಸ್ಯೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಮಲೆ ಮಹಾದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿದ್ದಾರೆ.

ಚಿಕ್ಕಮಗಳೂರು: ಶಕ್ತಿ ಯೋಜನೆಯಡಿ (Shakti Yojana) ಮಹಿಳೆಯರು (Women) ನಾನ್​​ ಎಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (KSRTC Bus) ಮಹಿಳೆಯರ ದರ್ಬಾರು ಜೋರಾಗಿದೆ. ಅದರಲ್ಲೂ ಇಂದು (ಜೂ.18) ಭಾನುವಾರ ಹಾಗೂ ಅಮಾವಾಸ್ಯೆ ಹಿನ್ನೆಲೆ ಮಹಿಳೆಯರ ದಂಡೇ ರಾಜ್ಯದ ಪ್ರಸಿದ್ಧ ಧರ್ಮ ಕ್ಷೇತ್ರಗಳತ್ತ ತೆರಳುತ್ತಿದೆ. ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದಾರೆ. ಹೀಗಾಗಿ ಬಸ್‌ಗಳಲ್ಲಿ ನೂಕುನುಗ್ಗಲು, ಕಾಲಿಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಹೆಚ್ಚಾಗಿ ಆಗಮಿಸುತ್ತಿದ್ದು, ದೇವಾಲಯಗಳಲ್ಲಿ ಮಹಿಳೆಯರೇ ತುಂಬಿದ್ದಾರೆ. ಆಷಾಢ ಅಮವಾಸ್ಯೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಮಲೆ ಮಹಾದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

Published on: Jun 18, 2023 02:09 PM