AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ತುಂಬಿದ್ದ ಲಾರಿ ಪಲ್ಟಿ; ರಾಯಚೂರು- ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಮದ್ಯ ತುಂಬಿದ್ದ ಲಾರಿ ಪಲ್ಟಿ; ರಾಯಚೂರು- ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಭೀಮೇಶ್​​ ಪೂಜಾರ್
| Edited By: |

Updated on: Jun 05, 2024 | 7:34 PM

Share

ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮದ್ಯ(alcohol) ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ  ನೀಡಲಾಗಿದೆ.

ರಾಯಚೂರು, ಜೂ.05: ಚಾಲಕನ ನಿಯಂತ್ರಣ ತಪ್ಪಿ ಮದ್ಯ(alcohol) ತುಂಬಿದ ಲಾರಿ ಪಲ್ಟಿಯಾದ ಘಟನೆ ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ. ರಸ್ತೆ ಮಧ್ಯೆ ಬೀಯರ್ ಬಾಟಲ್‌ಗಳು ಬಿದ್ದು ಪುಡಿಪುಡಿಯಾಗಿದ್ದು, ರಾಯಚೂರು-ಹೈದ್ರಾಬಾದ್ (Raichur to Hyderabad) ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ. ಅಬಕಾರಿ ಡಿಪೋದಿಂದ ಮದ್ಯವನ್ನ ತುಂಬಿಕೊಂಡು ಶಕ್ತಿನಗರಕ್ಕೆ ಈ ಲಾರಿ ಹೊರಟಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ  ನೀಡಲಾಗಿದೆ. ಈ ಕುರಿತು ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More