ಮದ್ಯ ತುಂಬಿದ್ದ ಲಾರಿ ಪಲ್ಟಿ; ರಾಯಚೂರು- ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ
ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮದ್ಯ(alcohol) ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಯಚೂರು, ಜೂ.05: ಚಾಲಕನ ನಿಯಂತ್ರಣ ತಪ್ಪಿ ಮದ್ಯ(alcohol) ತುಂಬಿದ ಲಾರಿ ಪಲ್ಟಿಯಾದ ಘಟನೆ ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ. ರಸ್ತೆ ಮಧ್ಯೆ ಬೀಯರ್ ಬಾಟಲ್‌ಗಳು ಬಿದ್ದು ಪುಡಿಪುಡಿಯಾಗಿದ್ದು, ರಾಯಚೂರು-ಹೈದ್ರಾಬಾದ್ (Raichur to Hyderabad) ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ. ಅಬಕಾರಿ ಡಿಪೋದಿಂದ ಮದ್ಯವನ್ನ ತುಂಬಿಕೊಂಡು ಶಕ್ತಿನಗರಕ್ಕೆ ಈ ಲಾರಿ ಹೊರಟಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ