AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕದ್ದು ಓಡುತ್ತಿರುವ ದೃಶ್ಯ ಸಿಸಿಟಿವಿ ವಿಡಿಯೋ ನೋಡಿ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕದ್ದು ಓಡುತ್ತಿರುವ ದೃಶ್ಯ ಸಿಸಿಟಿವಿ ವಿಡಿಯೋ ನೋಡಿ

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Oct 22, 2026 | 5:44 PM

Share

ವ್ಯಕ್ತಿಯೋರ್ವ ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕದ್ದೊಯ್ದಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಬಿನ್ನಿಪೇಟೆ ಅಂಜನ್ ಚಿತ್ರಮಂದಿರ ಬಳಿ ನಡೆದಿದೆ.   ಇಂದು (ಅ.22) ಮಧ್ಯಾಹ್ನ ರಾಜರಾಜೇಶ್ವರಿ ಜ್ಯುವೆಲ್ಸ್ ಅಂಗಡಿಗೆ ಬಂದ ವ್ಯಕ್ತಿ, ಅಂಗಡಿ ಮಾಲೀಕರನ್ನು ಯಾಮಾರಿಸಿ 10 ಗ್ರಾಂ ಚಿನ್ನ ಕದ್ದುಕೊಂಡು ಹೋಗಿದ್ದಾನೆ. ಸಭ್ಯಸ್ತನ ರೀತಿ ಅಂಗಡಿಗೆ ಬಂದು 1.5 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಕಳ್ಳತನ ಮಾಡಿ ಓಡಿ ಹೋಗಿದ್ದು, ಕಳ್ಳನ ಕರಾಮತ್ತು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು, (ಅಕ್ಟೋಬರ್ 22): ವ್ಯಕ್ತಿಯೋರ್ವ ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕದ್ದೊಯ್ದಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಬಿನ್ನಿಪೇಟೆ ಅಂಜನ್ ಚಿತ್ರಮಂದಿರ ಬಳಿ ನಡೆದಿದೆ.   ಇಂದು (ಅ.22) ಮಧ್ಯಾಹ್ನ ರಾಜರಾಜೇಶ್ವರಿ ಜ್ಯುವೆಲ್ಸ್ ಅಂಗಡಿಗೆ ಬಂದ ವ್ಯಕ್ತಿ, ಅಂಗಡಿ ಮಾಲೀಕರನ್ನು ಯಾಮಾರಿಸಿ 10 ಗ್ರಾಂ ಚಿನ್ನ ಕದ್ದುಕೊಂಡು ಹೋಗಿದ್ದಾನೆ. ಸಭ್ಯಸ್ಥನ ರೀತಿ ಅಂಗಡಿಗೆ ಬಂದು 1.5 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಕಳ್ಳತನ ಮಾಡಿ ಓಡಿ ಹೋಗಿದ್ದು, ಕಳ್ಳನ ಕರಾಮತ್ತು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 22, 2026 05:20 PM

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More