AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ

Jagadisha B
| Edited By: |

Updated on:Feb 24, 2026 | 3:28 PM

Share

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ತುಮಕೂರು, (ಫೆಬ್ರವರಿ 24): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಹೊಸದಾಗಿ ಮದುವೆಯಾಗಿದ್ದ ದಂಪತಿ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ದೇವಾಲಯದ ಒಳಗಿದ್ದ ವ್ಯಕ್ತಿಯೊಬ್ಬ ದಂಪತಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಬಳಿಕ ದೇವರು ಬಂದಂತೆ ನಟಿಸಿ ದಲಿತ ಕುಟುಂಬವನ್ನು ಹೊರಕಳಿಸಿದ್ದಾನೆ. ದಲಿತರು ನಿಮಗೆ ಪ್ರವೇಶವಿಲ್ಲ, ಪುಣ್ಯ ಮಾಡಿಸಬೇಕು’ ಎಂದ ಗದರಿ ಹೊರಕಳಿಸಿದ್ದಾನೆ. ದೇವರು ಬಂದಂತೆ ನಟಿಸಿ ನಾಟಕವಾಡಿದ ಆರೋಪಿಯನ್ನು ನಾರಾಯಣಪ್ಪ ಎಂದು ಗುರುತಿಸಲಾಗಿದ್ದು, ಈತ ನವದಂಪತಿಗೆ ‘ನಡೀ ಆಚೆಗೆ’ ಎಂದು ಗದರಿಸಿ ಅವಮಾನ ಮಾಡಿದ್ದಾನೆ.

ಈ ಪ್ರಕರಣದಲ್ಲಿ ತಹಶೀಲ್ದಾರ್ ಮಧ್ಯೆ ಪ್ರವೇಶಿಸಿ ಬಳಿಕ ಗೋಣಿ ತುಮಕೂರು ಗ್ರಾಮದಲ್ಲಿ ಆಯೋಜಿಸಿದ್ದ ಶಾಂತಿ ಸಭೆ ಯಶಸ್ವಿಯಾಗಿದೆ. ​ಜಾತಿಯ ವಿಷಬೀಜ ಬಿಡಿ, ಬಸವಣ್ಣನವರ ತತ್ವ ಪಾಲಿಸಿ ಸೌಹಾರ್ದತೆಯಿಂದ ಇರುವಂತೆ ಗ್ರಾಮಸ್ಥರಿಗೆ ತಹಶೀಲ್ದಾರ್​​ ಸಲಹೆ ನೀಡಿದರು. ಬಳಿಕ ನವಜೋಡಿಯ ಕೈಹಿಡಿದು ದೇಗುಲದೊಳಗೆ ಕರೆದೊಯ್ದ ದೇವರ ದರ್ಶನ ಮಾಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 24, 2026 03:26 PM
Follow Us