ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು ಬಯಲು

Updated on: Dec 19, 2025 | 4:28 PM

ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ದುರುಳನೊಬ್ಬ ಕ್ರೌರ್ಯ ಮರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತನ್ನ ಪಾಡಿಗೆ ತಾನು ಆಟವಾಡ್ತಿದ್ದ ಬಾಲಕನನ್ನ ರಂಜನ್​ ಎಂಬಾತ ಫುಟ್​ಬಾಲ್​ನಂತೆ ಒದ್ದು ವಿಕೃತಿ ಮೆರೆದಿದ್ದಾನೆ. ರಂಜನ್ ಹಲ್ಲೆಯಿಂದ ಬಾಲಕನ ಮೈ-ಕೈಗೆ ಗಾಯವಾಗಿದ್ದು, ಬಾಲಕನ ತಾಯಿ ದೂರು ಆಧರಿಸಿ ಬನಶಂಕರಿ ಪೊಲೀಸರು ಆರೋಪಿ ರಂಜನ್​ನನ್ನ ಬಂಧಿಸಿದ್ದಾರೆ.

ಬೆಂಗಳೂರು, (ಡಿಸೆಂಬರ್ 19): ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ದುರುಳನೊಬ್ಬ ಕ್ರೌರ್ಯ ಮರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತನ್ನ ಪಾಡಿಗೆ ತಾನು ಆಟವಾಡ್ತಿದ್ದ ಬಾಲಕನನ್ನ ರಂಜನ್​ ಎಂಬಾತ ಫುಟ್​ಬಾಲ್​ನಂತೆ ಒದ್ದು ವಿಕೃತಿ ಮೆರೆದಿದ್ದಾನೆ. ರಂಜನ್ ಹಲ್ಲೆಯಿಂದ ಬಾಲಕನ ಮೈ-ಕೈಗೆ ಗಾಯವಾಗಿದ್ದು, ಬಾಲಕನ ತಾಯಿ ದೂರು ಆಧರಿಸಿ ಬನಶಂಕರಿ ಪೊಲೀಸರು ಆರೋಪಿ ರಂಜನ್​ನನ್ನ ಬಂಧಿಸಿದ್ದಾರೆ.

ಹಲ್ಲೆ ಸಂಬಂಧ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ರಸ್ತೆಯಲ್ಲಿನ ಸಿಸಿಟಿವಿ ಚೆಕ್ ಮಾಡಿದ್ದಾರೆ. ಈ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಗಳು ಬೆಳಕಿಗೆ ಬಂದಿವೆ. ಇಂತಹ ಕೃತ್ಯ ಇದೇ ಮೊದಲಲ್ಲ, ಈ ಹಿಂದೆಯೂ ಹಲವರಿಗೆ ಈ ಸೈಕೋ ರಂಜಿತ್‌ ಕಿರುಕುಳ ಕೊಟ್ಟಿದ್ದಾನೆ ಎಂಬುವುದು ತಿಳಿದುಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ನೋಡಿ; ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ