AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ

ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Aug 08, 2026 | 5:51 PM

Share

ನೂತನ ಸಚಿವರಾಗಿ ಕೆಎಸ್ ಬಸವಂತಪ್ಪ ಅವರು ಇಂದು (ಆಗಸ್ಟ್ 08) ಮೊದಲ ಬಾರಿಗೆ ಸ್ವಕ್ಷೇತ್ರ ಮಾಯಕೊಂಡಕ್ಕೆ ಆಗಮಿಸಿದ್ದು, ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ನೂತನ ಮಂತ್ರಿಗೆ ಹೂಗುಚ್ಚ ನೀಡಿ ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ್ದಾರೆ. ಆದ್ರೆ, ಈ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು....ಬಸವಂತಪ್ಪನವರನ್ನು ಬರಮಾಡಿಕೊಳ್ಳುವ ಬರದಲ್ಲಿದ್ದ ಅಭಿಮಾನಿಯೊಬ್ಬರ ಜೇಬಿಗೆ ಕತ್ತರಿ ಹಾಕಿ ಒಂದು ಲಕ್ಷ ರೂಪಾಯಿ ದೋಚಿಕೊಂಡು ಹೋಗಿದ್ದಾರೆ. ಹೌದು....ನೀರ್ಥಡಿ ಗ್ರಾಮದ ಸಂತೋಷ ಎನ್ನುವಾತ ಸಚಿವರ ಸ್ವಾಗತಕ್ಕೆ ಬಂದು 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ದಾವಣಗೆರೆ, (ಆಗಸ್ಟ್ 08): ನೂತನ ಸಚಿವರಾಗಿ ಕೆಎಸ್ ಬಸವಂತಪ್ಪ ಅವರು ಇಂದು (ಆಗಸ್ಟ್ 08) ಮೊದಲ ಬಾರಿಗೆ ಸ್ವಕ್ಷೇತ್ರ ಮಾಯಕೊಂಡಕ್ಕೆ ಆಗಮಿಸಿದ್ದು, ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ನೂತನ ಮಂತ್ರಿಗೆ ಹೂಗುಚ್ಚ ನೀಡಿ ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ್ದಾರೆ. ಆದ್ರೆ, ಈ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು….ಬಸವಂತಪ್ಪನವರನ್ನು ಬರಮಾಡಿಕೊಳ್ಳುವ ಬರದಲ್ಲಿದ್ದ ಅಭಿಮಾನಿಯೊಬ್ಬರ ಜೇಬಿಗೆ ಕತ್ತರಿ ಹಾಕಿ ಒಂದು ಲಕ್ಷ ರೂಪಾಯಿ ದೋಚಿಕೊಂಡು ಹೋಗಿದ್ದಾರೆ. ಹೌದು….ನೀರ್ಥಡಿ ಗ್ರಾಮದ ಸಂತೋಷ ಎನ್ನುವಾತ ಸಚಿವರ ಸ್ವಾಗತಕ್ಕೆ ಬಂದು 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 08, 2026 05:50 PM

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More