ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳವು: ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ
ಅಮಾಯಕನಂತೆ ಬರುವ ಯುವಕನೋರ್ವ ಅಂಗಡಿ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ನ ಹ್ಯಾಂಡಲ್ ಲಾಕ್ ಕದ್ದು ಪರಾರಿಯಾಗಿರುವ ಘಟನೆ ಕೋಲಾರದ ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ನಡೆದಿದೆ. ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ ಮುಳಬಾಗಿಲು ಗ್ರಾಮಾಂತರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೋಲಾರ, ಅಕ್ಟೋಬರ್ 06: ಅಂಗಡಿ ಎದುರು ನಿಲ್ಲಿಸಿದ್ದ ಬೈಕ್ ಕಳವಾಗಿರುವ ಘಟನೆ ಮುಳಬಾಗಿಲು (Mulabagilu) ತಾಲೂಕಿನ ತಾಯಲೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಎಂಬುವರಿಗೆ ಸೇರಿದ ಪಲ್ಸರ್ ಬೈಕ್ ಕದ್ದು ಕಳ್ಳ ಪರಾರಿಯಾಗಿದ್ದು, ಬೈಕ್ ಕಳ್ಳತನದ ದೃಶ್ಯ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಮಾಯಕನಂತೆ ಬರುವ ಕಳ್ಳ, ಬೈಕ್ ನ ಹ್ಯಾಂಡಲ್ ಲಾಕ್ ಮುರಿದು ಕದ್ದೊಯ್ದಿದ್ದಾನೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

