ಸಿಎಂ ಇದ್ದ ವೇದಿಕೆಗೆ ಏಕಾಏಕಿ ನುಗ್ಗಿದ ಯುವಕ; ಗಣ್ಯರು ಗಲಿಬಿಲಿ, ಮುಂದೇನಾಯ್ತು?
ವಿಧಾನಸೌಧದ ಮುಂದೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ವೇದಿಕೆ ಮೇಲೆ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯುವಕ ಯತ್ನಿಸಿದ್ದು ವೇದಿಕೆ ಮೇಲ್ಭಾಗಕ್ಕೆ ಜಂಪ್ ಮಾಡಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಹಲವು ಗಣ್ಯರು ತಬ್ಬಿಬ್ಬಾಗಿದ್ದಾರೆ.
ಬೆಂಗಳೂರು, ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವ ಗಾಬರಿ ಮೂಡಿಸಿದ್ದಾನೆ. ವಿಧಾನಸೌಧದ ಮುಂದೆ ನಡೆಯುತ್ತಿರುವ ಕಾರ್ಯಕ್ರಮದ ವೇದಿಕೆ ಮೇಲೆ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯುವಕ ಯತ್ನಿಸಿದ್ದು ವೇದಿಕೆ ಮೇಲ್ಭಾಗಕ್ಕೆ ಜಂಪ್ ಮಾಡಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಹಲವು ಗಣ್ಯರು ತಬ್ಬಿಬ್ಬಾಗಿದ್ದಾರೆ. ಸಿಎಂ ಅಂಗರಕ್ಷಕರು ಕೂಡಲೇ ಯುವಕನನ್ನ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದರೂ ಯುವಕ ಸಿಎಂ ಕಡೆ ಶಾಲು ಎಸೆದಿದ್ದಾನೆ. ಯುವಕ ನುಗ್ಗಿದ ವೇಗಕ್ಕೆ ಗಣ್ಯರು ಗಲಿಬಿಲಿಗೊಂಡರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:59 am, Sun, 15 September 24