AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್​, ಸಾರ್ವಜನಿಕರಿಂದ ಆಕ್ರೋಶ

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್​, ಸಾರ್ವಜನಿಕರಿಂದ ಆಕ್ರೋಶ

ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on:May 25, 2025 | 9:49 PM

Share

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದ ಅಮಾನವೀಯ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಬ್ಬ ವ್ಯಕ್ತಿ ತನ್ನ ನಾಯಿಯನ್ನು ಬೈಕಿನ ಹಿಂಭಾಗಕ್ಕೆ ಕಟ್ಟಿ ಎಳೆದಾಡಿದ್ದಾನೆ. ಈ ದೃಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಈ ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ನಾಯಿ ಕ್ರೂರತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಉಡುಪಿಯ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಯಿಯನ್ನು ಬೈಕಿನ ಹಿಂಬದಿಗೆ ಚೈನಿನಿಂದ ಕಟ್ಟಿ ಎಳೆದೊಯ್ದ ಘಟನೆ ಬೈಂದೂರು ತಾಲೂಕಿನಲ್ಲಿ ನಡೆದಿದೆ. ಈ ಅಮಾನವೀಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವ್ಯಕ್ತಿಯೋರ್ವ ತನ್ನ ಸಾಕು ನಾಯಿಯನ್ನೇ ಬೈಕಿಗೆ ಸರಪಣಿಯಿಂದ ಕಟ್ಟಿ ಎಳೆದೊಯ್ದಿದ್ದಾನೆ. ಈ ದೃಶ್ಯ ಕಂಡು ಸಾರ್ವಜನಿಕರು ನಾಯಿ ಮಾಲೀಕನಿಗೆ ತರಾಟೆಗೆ ತೆಗೆದುಕೊಂಡರು. ಈತನ ವಿರುದ್ಧ ಕಠಿಣ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಬಗ್ಗೆ ಬೈಂದೂರು ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

Published on: May 25, 2025 09:34 PM

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More