Loading video

ಧಾರವಾಡ: ಶಾಲೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ಕಚ್ಚಿದ ಕೋತಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

Updated on: Jun 27, 2023 | 1:39 PM

ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಕೋತಿಯೊಂದು ಅಟ್ಟಾಡಿಸಿ ಕಚ್ಚಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದ ಉರ್ದು ಶಾಲೆಯಲ್ಲಿ ನಡೆದಿದೆ. 2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಇಕರಾ ಗಡಕಾರಿ ಎಡಗಾಲಿಗೆ ಕೋತಿ ಕಚ್ಚಿದೆ.

ಧಾರವಾಡ: ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಕೋತಿಯೊಂದು ಅಟ್ಟಾಡಿಸಿ ಕಚ್ಚಿದ ಘಟನೆ ಧಾರವಾಡ (Dharwad) ತಾಲೂಕಿನ ಗರಗ ಗ್ರಾಮದ ಉರ್ದು ಶಾಲೆಯಲ್ಲಿ ನಡೆದಿದೆ. 2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಇಕರಾ ಗಡಕಾರಿ ಎಡಗಾಲಿಗೆ ಕೋತಿ(Monkey) ಕಚ್ಚಿದೆ. ಕೂಡಲೇ ಗಾಯಾಳು ವಿದ್ಯಾರ್ಥಿನಿ ಇಕರಾಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿ, ಬಳಿಕ ಗಂಭೀರ ಗಾಯಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್​ಗೆ ದಾಖಲು ಮಾಡಲಾಗಿದೆ. ಇನ್ನು ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಶಾಲೆಯಲ್ಲಿ ಕೋತಿ ದಾಳಿ ಮಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ