ಕೊಪ್ಪಳದಿಂದಲೇ ಮತ್ತೊಂದು ಸುದ್ದಿಯಿದೆ ಮಾರಾಯ್ರೇ. ಏನು ಗೊತ್ತಾ? ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ನಜೀರುದ್ದೀನ್ (Naziruddin) ಅವರ ಕುಟುಂಬ ವಾಸವಾಗಿದೆ. ಈ ಕುಟುಂಬ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಪ್ರತಿರೂಪವೆಂದರೆ ಉತ್ಪ್ರೇಕ್ಷೆ ಅನಿಸದು. ಅವರ ಮನೆಯಲ್ಲಿ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗಿದೆ. ಹಿಂದೂ ಸಂಪ್ರದಾಯದ ಹಾಗೆ ಮನೆಗೆ ತಳಿರು ತೋರಣಗಳನ್ನು ಕಟ್ಟಿ ವರಮಹಾಷಕ್ಷ್ಮಿಗೆ ಪೂಜೆ ಸಲ್ಲಿಸಿ ನೈವೇದ್ಯ ಸಮರ್ಪಿಸಲಾಗಿದೆ. ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ?