ಕೊಪ್ಪಳದಲ್ಲಿ ಮುಸ್ಲಿಂ ಕುಟುಂಬದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ!

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 06, 2022 | 12:32 PM

ಅವರ ಮನೆಯಲ್ಲಿ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗಿದೆ. ಹಿಂದೂ ಸಂಪ್ರದಾಯದ ಹಾಗೆ ಮನೆಗೆ ತಳಿರು ತೋರಣಗಳನ್ನು ಕಟ್ಟಿ ವರಮಹಾಷಕ್ಷ್ಮಿಗೆ ಪೂಜೆ ಸಲ್ಲಿಸಿ ನೈವೇದ್ಯ ಸಮರ್ಪಿಸಲಾಗಿದೆ.

ಕೊಪ್ಪಳದಿಂದಲೇ ಮತ್ತೊಂದು ಸುದ್ದಿಯಿದೆ ಮಾರಾಯ್ರೇ. ಏನು ಗೊತ್ತಾ? ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ನಜೀರುದ್ದೀನ್ (Naziruddin) ಅವರ ಕುಟುಂಬ ವಾಸವಾಗಿದೆ. ಈ ಕುಟುಂಬ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಪ್ರತಿರೂಪವೆಂದರೆ ಉತ್ಪ್ರೇಕ್ಷೆ ಅನಿಸದು. ಅವರ ಮನೆಯಲ್ಲಿ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗಿದೆ. ಹಿಂದೂ ಸಂಪ್ರದಾಯದ ಹಾಗೆ ಮನೆಗೆ ತಳಿರು ತೋರಣಗಳನ್ನು ಕಟ್ಟಿ ವರಮಹಾಷಕ್ಷ್ಮಿಗೆ ಪೂಜೆ ಸಲ್ಲಿಸಿ ನೈವೇದ್ಯ ಸಮರ್ಪಿಸಲಾಗಿದೆ. ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ?

Published on: Aug 06, 2022 11:18 AM