Shettar Vs BSY; ಯಾವುದೇ ಹೊಸ ಸರ್ಕಾರಕ್ಕೆ ಜನತೆಗೆ ನೀಡಿದ ಭರವಸೆಗಳನ್ನು ಜಾರಿಗೊಳಿಸಲು ಕನಿಷ್ಠ 6 ತಿಂಗಳು ಬೇಕು: ಜಗದೀಶ್ ಶೆಟ್ಟರ್

Updated on: Jun 23, 2023 | 7:28 PM

ಕೇಂದ್ರದ ಏಜೆನ್ಸಿಗಳು ಅಕ್ಕಿ ಪೂರೈಸುವ ಕೆಲಸ ಮಾಡಿದ್ದರೆ ಅನ್ನಭಾಗ್ಯ ಯೋಜನೆ ಜುಲೈ ತಿಂಗಳಲ್ಲೇ ಜಾರಿಗೊಳ್ಳುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.   

ಬೆಂಗಳೂರು: ಅನ್ನಬಾಗ್ಯ ಯೋಜನೆ (Anna Bhagya Scheme) ಜಾರಿಮಾಡದಿದ್ದರೆ ವಿಧಾನ ಸೌಧದ ಮುಂದೆ ಧರಣಿ ಮಾಡುವುದಾಗಿ ಹೇಳಿರುವ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪರನ್ನು  (BS Yediyurappa) ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ (Jagadish Shettar) ಟೀಕಿಸಿದ್ದಾರೆ. ಬೆಂಗಳೂರಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು ಯಾವುದೇ ಸರಕಾರ ಅಧಿಕಾರಕ್ಕೆ ಬಂದಾಗ, ಜನತೆಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಲು ಅಥವಾ ಕಾರ್ಯರೂಪಕ್ಕೆ ತರಲು ಕನಿಷ್ 6 ತಿಂಗಳು ಬೇಕಾಗುತ್ತದೆ ಎಂದರು. ಒಂದೇ ದಿನದಲ್ಲಿ ಈಡೇರಿಸಬೇಕು ಅಂತ ಆಗ್ರಹಿಸಿದರೆ ಅದು ಕೆಟ್ಟ ರಾಜಕಾರಣ ಅನಿಸಿಕೊಳ್ಳುತ್ತದೆ ಎಂದು ಶೆಟ್ಟರ್ ಪರೋಕ್ಷವಾಗಿ ಯಡಿಯೂರಪ್ಪರನ್ನು ತರಾಟೆಗೆ ತೆಗೆದುಕೊಂಡರು. ಒಂದು ಪಕ್ಷ ಕೇಂದ್ರದ ಏಜೆನ್ಸಿಗಳು ಅಕ್ಕಿ ಪೂರೈಸುವ ಕೆಲಸ ಮಾಡಿದ್ದರೆ ಅನ್ನಭಾಗ್ಯ ಯೋಜನೆ ಜುಲೈ ತಿಂಗಳಲ್ಲೇ ಜಾರಿಗೊಳ್ಳುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More