AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Mar 30, 2026 | 4:42 PM

Share

ಪ್ರೀತಿಸಿ ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು... ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು. ಆದ್ರೆ, ವಿಧಿ ಜೋಡಿಯನ್ನು ಬಾಳಲು ಬಿಟ್ಟಿಲ್ಲ. ಈ ಸಂಬಂಧ ಸಂಬಂಧಿಕ ಆಕ್ರಂದನ ಮುಗಿಲು ಮುಟ್ಟಿದೆ.

ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (Love) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು. ಆದ್ರೆ, ವಿಧಿ ಜೋಡಿಯನ್ನು ಬಾಳಲು ಬಿಟ್ಟಿಲ್ಲ. ಈ ಸಂಬಂಧ ಸಂಬಂಧಿಕ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More