Karnataka Assembly Polls: ವರುಣಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಪ್ರಾರಂಭಿಸಿದ ವಿ ಸೋಮಣ್ಣ, ಸಾಯಂಕಾಲ ಚಾಮರಾಜನಗರಕ್ಕೆ ಭೇಟಿ

|

Updated on: Apr 13, 2023 | 11:27 AM

ವರುಣಾ ಕ್ಷೇತ್ರದಲ್ಲಿಇಂದು ಪ್ರಚಾರ ಕಾರ್ಯ ಆರಂಭಿಸುವ ಮೊದಲು ಸೋಮಣ್ಣ ಪುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ ಮತ್ತು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

ಮೈಸೂರು: ಬೆಂಗಳೂರಿನ ಗೋವಿಂದರಾಜ ನಗರ ಬಿಟ್ಟು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಿಗೆ ಟಿಕೆಟ್ ನೀಡಿದ್ದಕ್ಕೆ ನಿನ್ನೆ ಬೆಂಗಳೂರಲ್ಲಿ ತೀವ್ರ ಅಸಮಾಧಾನಗೊಂಡಿದ್ದ ವಸತಿ ಸಚಿವ ವಿ ಸೋಮಣ್ಣ (V Somanna) ಇಂದು ಮೈಸೂರಲ್ಲಿ ಯುದ್ಧಸನ್ನದ್ಧರಂತೆ ಕಂಡರು. ವರುಣಾ ಕ್ಷೇತ್ರದಲ್ಲಿ (Varuna constituency) ಇಂದು ಪ್ರಚಾರ ಕಾರ್ಯ ಆರಂಭಿಸುವ ಮೊದಲು ಪುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ ಮತ್ತು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ (Chamundeshwari) ಪೂಜೆ ಸಲ್ಲಿಸಿದ್ದಾರೆ. ನಂತರ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಣ್ಣ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸಿರುವ ಅಭಿವೃದ್ಧಿ ಕೆಲಸಗಳು ಎಲ್ಲಾ ಗ್ರಾಮಗಳಿಗೆ ತಲುಪಿವೆ, ಈಗ ಆ ಕೆಲಸಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವುದಷ್ಟೇ ತಮ್ಮ ಕೆಲಸ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 13, 2023 10:28 AM