ಮಂಗಳೂರು: 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗ ರಕ್ಷಕ; ವಿಡಿಯೋ ಇಲ್ಲಿದೆ

| Updated By: Rakesh Nayak Manchi

Updated on: Nov 28, 2023 | 6:34 PM

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಉರಗ ರಕ್ಷಕರೊಬ್ಬರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿದ್ದ ಕಾಳಿಂಗ ಸರ್ಪದ ಸೆರೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಮಂಗಳೂರು, ನ.28: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು (King Cobra) ಸೆರೆಹಿಡಿಯಲಾಗಿದೆ. ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿದ್ದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಕೆ. ಝಕರಿಯಾ ಅವರು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪವನ್ನು ಸೆರೆಹಿಡಿಯುವ ದೃಶ್ಯವನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ