ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ:ಸ್ಥಳೀಯ ವ್ಯಕ್ತಿ ಹೇಳಿದ್ದೇನು ಗೊತ್ತಾ?

Edited By:

Updated on: Dec 01, 2025 | 10:46 PM

ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೆರೆ ಗ್ರಾಮದಲ್ಲಿ ನಡೆದಿದೆ. ಪತಿ ನಿಧನ ನಂತರ ಮಂಜುಳಾ ಮಗನ ಜೊತೆ ತೋಟದ ಮನೆಯಲ್ಲಿ ವಾಸವಿದ್ದಳು. ಆದ್ರೆ, ಮಗ ಪತ್ನಿ ಮನೆಗೆ ಹೋಗಿದ್ದಾಗ ದುಷ್ಕರ್ಮಿಗಳು, ತೋಟದ ಮನೆಯೊಳಗೆ ನುಗ್ಗಿ ಒಂಟಿಯಾಗಿದ್ದ ಮಂಜುಳಾನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ತುಮಕೂರು, (ಡಿಸೆಂಬರ್01): ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೆರೆ ಗ್ರಾಮದಲ್ಲಿ ನಡೆದಿದೆ. ಪತಿ ನಿಧನ ನಂತರ ಮಂಜುಳಾ ಮಗನ ಜೊತೆ ತೋಟದ ಮನೆಯಲ್ಲಿ ವಾಸವಿದ್ದಳು. ಆದ್ರೆ, ಮಗ ಪತ್ನಿ ಮನೆಗೆ ಹೋಗಿದ್ದಾಗ ದುಷ್ಕರ್ಮಿಗಳು, ತೋಟದ ಮನೆಯೊಳಗೆ ನುಗ್ಗಿ ಒಂಟಿಯಾಗಿದ್ದ ಮಂಜುಳಾನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಗ ಸೊಸೆ ಇಲ್ಲದನ್ನು ನೋಡಿಯೇ ನಿನ್ನೆ(ನವೆಂಬರ್ 30) ಮನೆಗೆ ನುಗ್ಗಿ ಹತ್ಯೆ ಮಾಡಲಾಗಿದ್ದು, ಇಂದು (ಡಿಸೆಂಬರ್ 01) ಬೆಳಗ್ಗೆ ಮೈದುನ ತೋಟದ ಮನೆ ಬಳಿ ತೆರಳಿದಾಗ ಮಂಜುಳಾ ಕೊಲೆಯಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ .ಎಸ್.ಪುರ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More