ಒಂದೇ ಶಾಲೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ವಿಶೇಷ ಬೀಳ್ಕೊಡುಗೆ

Updated on: Nov 11, 2023 | 4:18 PM

Ballari: ಬಳ್ಳಾರಿ ತಾಲೂಕಿನ ಡಿ.ಕಗ್ಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ಏಕಕಾಲದಲ್ಲಿ ವರ್ಗಾವಣೆಗೊಂಡ ಹಿನ್ನೆಲೆ ಡಿಜೆ ಹಾಕಿ, ಬೆಳ್ಳಿ ರಥದಲ್ಲಿ ಮೈದಾನದಿಂದ ಡಿ‌.ಕಗ್ಗಲ್ ಗ್ರಾಮದ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮೆರವಣಿಗೆ ಮಾಡುವ ಮೂಲಕ ಅದ್ದೂರಿ ಬೀಳ್ಕೊಡುಗೆ ನೀಡಿದ್ದಾರೆ.

ಬಳ್ಳಾರಿ, ನವೆಂಬರ್​​​ 11: ಏಕಕಾಲದಲ್ಲಿ ವರ್ಗಾವಣೆಗೊಂಡ ಒಂದೇ ಶಾಲೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ವಿಶೇಷ ಬೀಳ್ಕೊಡುಗೆ (farewell) ಮಾಡಲಾಗಿದೆ. ಡಿಕೆ ವಿನಯ್, ರಾಘವ ರೆಡ್ಡಿ, ಸಾಗರ್, ಬಸಪ್ಪ ವರ್ಗಾವಣೆಗೊಂಡ ನಾಲ್ವರು ಶಿಕ್ಷಕರು. ಬಳ್ಳಾರಿ ತಾಲೂಕಿನ ಡಿ.ಕಗ್ಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ಡಿಜೆ ಹಾಕಿ, ಬೆಳ್ಳಿ ರಥದಲ್ಲಿ ಮೈದಾನದಿಂದ ಡಿ‌.ಕಗ್ಗಲ್ ಗ್ರಾಮದ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More