ಪ್ರಿನ್ಸಿಪಾಲ್ ಬೈದರೆಂದು ಶಾಲೆ ಮೇಲಿಂದಲೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಬೆಂಗಳೂರಿನ ಬಾಪೂಜಿನಗರದ Al ಫಹಾದ್ ಶಾಲೆಯಲ್ಲಿ ಪ್ರಾಂಶುಪಾಲರು ಬೈದರೆಂದು ವಿದ್ಯಾರ್ಥಿನಿ(Student) ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯಾರ್ಥಿನಿ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು, ಆ.23: ಪ್ರಾಂಶುಪಾಲರು ಬೈದರೆಂದು ವಿದ್ಯಾರ್ಥಿನಿ(Student) ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬಾಪೂಜಿನಗರದ Al ಫಹಾದ್ ಶಾಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ 10ನೇ ತರಗತಿ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬಾಲಕಿ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಇದುವರೆಗೂ ಯಾರು ದೂರು ನೀಡಿಲ್ಲ. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

