ಚಲಿಸುವ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದ ವಿದ್ಯಾರ್ಥಿ; ಮುಂದೆ ಆಗಿದ್ದೇನು? ನೀವೇ ನೋಡಿ
ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಪ್ರಯತ್ನಿಸಿ ಬಸ್ನಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದಿರುವಂತಹ ಘಟನೆ ಸಂಭವಿಸಿದೆ.
ಶಿವಮೊಗ್ಗ: ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಪ್ರಯತ್ನಿಸಿ ಬಸ್ನಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದಿರುವಂತಹ ಘಟನೆ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ನಿಲ್ದಾಣದಿಂದ ಹೊರಟ ಬಸ್ಸನ್ನು ಓಡಿ ಹೋಗಿ ಹತ್ತಲು ವಿದ್ಯಾರ್ಥಿ ಯತ್ನಿಸಿದ್ದಾನೆ. ಆದರೆ ಬಸ್ಸು ಸ್ಪೀಡ್ ಇದ್ದಿದ್ದರಿಂದ ವಿದ್ಯಾರ್ಥಿಗೆ ಹತ್ತಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ವಿದ್ಯಾರ್ಥಿ ಜಸ್ಟ್ ಮಿಸ್ ಆಗಿದ್ದು, ಯಾವುದೇ ಪ್ರಾಣಹಾಣಿ ಸಂಭವಿಸಿಲ್ಲ. ಮೇಲೆಹಾರಿ ಕೆಳಗೆ ಬಿದ್ದ ವಿದ್ಯಾರ್ಥಿ ನಂತರ ತಾನೇ ಮೇಲೆ ಎದ್ದು, ಮೈವರೆಸಿಕೊಂಡು ಏನೂ ನಡದೇ ಇಲ್ಲವೆನ್ನುವ ಹಾಗೆ ಮುಂದೆ ಸಾಗಿದ್ದಾನೆ.
ಇದನ್ನೂ ಓದಿ;
ನಿಯಂತ್ರಣ ಕಳೆದುಕೊಂಡ ಚಾಲಕ; ಕಿಶ್ತ್ವಾರ್ ಜಿಲ್ಲೆಯಲ್ಲಿ ವಾಹನ ಕಂದಕಕ್ಕೆ ಬಿದ್ದು ಆರು ಮಂದಿ ಸಾವು
Loading...
Unable to load recommendations.
Follow Us