ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ
ಬೆಂಗಳೂರಿನ ರಾಮಮೂರ್ತಿನಗರ ಬಳಿ ಇರುವ ಫ್ಲೈ ಓವರ್ ಬಳಿ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಸದ್ಯ ಬ್ಯಾಗ್ ನೋಡಿ ಭಯಗೊಂಡಿರುವ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಮೇ.30: ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳಲು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಇದರ ನಡುವೆ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬರುವುದು ಹೆಚ್ಚಾಗಿದೆ. ಇಂದು ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ರಾಮಮೂರ್ತಿನಗರ ಬಳಿ ಇರುವ ಫ್ಲೈ ಓವರ್ ಬಳಿ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ನೋಡಿ ಭಯಗೊಂಡಿರುವ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ನಿನ್ನೆ ಅಷ್ಟೇ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ, ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಶ್ವಾನದಳ ಹಾಗೂ ಸಿಐಎಸ್ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿತ್ತು. ಇದಾಗ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.
ಬ್ಯಾಗ್ನಲ್ಲಿ ಬಟ್ಟೆ ಪತ್ತೆ, ಪೊಲೀಸರು ನಿರಾಳ
ಆತಂಕ ಸೃಷ್ಟಿಸಿದ್ದ ಅನುಮಾನಸ್ಪದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಗ್ ತೆಗೆದು ಪೊಲೀಸರು ಪರಿಶೀಲನೆ ಮಾಡಿದ್ದು ಬ್ಯಾಗ್ನಲ್ಲಿ ಬಟ್ಟೆಗಳು ಸಿಕ್ಕಿವೆ. ರಸ್ತೆಬದಿ ಬ್ಯಾಗ್ ಇಟ್ಟು ಮಹಿಳೆ ಶೌಚಾಲಯಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ. ಸದ್ಯ ಬ್ಯಾಗ್ನಲ್ಲಿ ಬಟ್ಟೆಗಳು ಇದ್ದಿದ್ದರಿಂದ ಪೊಲೀಸರು ನಿರಾಳರಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ