ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ತಮಿಳುನಾಡು ಸರ್ಕಾರದ ನಿಯೋಗ

ಅರುಣ್​ ಕುಮಾರ್​ ಬೆಳ್ಳಿ

Updated on: Mar 12, 2025 | 5:11 PM

ಶಿವಕುಮಾರ್ ನೀಡಿದ ಹೇಳಿಕೆಯ ಪ್ರಕಾರ ಕೇಂದ್ರ ಸರ್ಕಾರವು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡನೆ ಮಾಡಿ ಸಂಸತ್ತಿನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕಮ್ಮಿ ಮಾಡುವ ಮತ್ತು ಹಿಂದಿ ಭಾಷೆ ಹೇರಿಕೆಗೆ ಯತ್ನಿಸುತ್ತಿದೆ. ಕೇಂದ್ರ ಸರ್ಕಾರದ ನಡೆಗಳನ್ನು ವಿರೋಧಿಸಲು ತಮಿಳುನಾಡು ಸರ್ಕಾರ ಮಾರ್ಚ್​ 22ರಂದು ಸಭೆಯೊಂದನ್ನು ನಡೆಸುವ ನಿರ್ಧಾರ ಮಾಡಿದ್ದು ಅದರಲ್ಲಿ ಭಾಗವಹಿಸುವಂತೆ ಆಮಂತ್ರಣ ನೀಡಲು ನಿಯೋಗ ಆಗಮಿಸಿತ್ತು.

ಬೆಂಗಳೂರು, ಮಾರ್ಚ್ 12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಅನಿರೀಕ್ಷಿತ ಅತಿಥಿಗಳ ಆಗಮನವಾಯಿತು. ತಮಿಳುನಾಡು ಅರಣ್ಯ ಸಚಿವ ಡಾ ಕೆ ಪೊನ್ನುಮುಡಿ (Dr K Ponnumudi) ಮತ್ತು ರಾಜ್ಯಸಭಾ ಸದಸ್ಯ ಮೊಹಮ್ಮದ್ ಅಬ್ದುಲ್ಲಾ ಇಸ್ಮಾಯಿಲ್ ನೇತೃತ್ವದ ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸತ್ಕರಿಸಿತು. ಈ ಸಂದರ್ಭದಲ್ಲಿ ತಮಿಳುನಾಡು ಗಣ್ಯರು ಸಿದ್ದರಾಮಯ್ಯನವರಿಗೆ ಶಾಲು ಹೊದೆಸಿ ಸನ್ಮಾನಿದರಲ್ಲದೆ ಸ್ಮರಾಣಾರ್ಥವಾಗಿ ಕೆಲವು ಪುಸ್ತಗಳನ್ನು ನೀಡಿದರು. ನಿಯೋಗವು ಸಿಎಂ ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೂ ಭೇಟಿಯಾಯಿತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.