Karnataka Assembly Polls Results: ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕೂತು ಅತಂಕದಲ್ಲೇ ಟಿವಿ9 ಕನ್ನಡ ವಾಹಿನಿ ವೀಕ್ಷಿಸುತ್ತಿರುವ ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: May 13, 2023 | 10:48 AM

ಅವರ ಮತ್ತು ಬಿಜೆಪಿ ನಾಯಕರ ಲೆಕ್ಕಾಚಾರಗಳು ಸದ್ಯಕ್ಕಂತೂ ಫೇವರೆಬಲ್ ಅಗಿಲ್ಲ ಅನ್ನೋದು ಸತ್ಯ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತಎಣಿಕೆ (counting) ಕಾರ್ಯ ಭರದಿಂದ ಸಾಗುತ್ತಿದೆ. ರಾಜ್ಯದ ಎಲ್ಲ ನಾಯಕರಲ್ಲಿ ಆತಂಕ ಮನೆ ಮಾಡಿರುವುದು ಸಹಜವೇ. ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಸಹ ಆತಂಕಭರಿತರಾಗಿಯೇ ತಮ್ಮ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕೂತು ಟಿವಿ9 ಕನ್ನಡ ವಾಹಿನಿಯಲ್ಲಿ ಚುನಾವಣೆ ಫಲಿತಾಂಶಕ್ಕೆ (results) ಸಂಬಂಧಿಸಿದ ಸುದ್ದ್ದಿಗಳನ್ನು ವೀಕ್ಷಿಸುತ್ತಿದ್ದಾರೆ. ಅವರ ಮತ್ತು ಬಿಜೆಪಿ ನಾಯಕರ ಲೆಕ್ಕಾಚಾರಗಳು ಸದ್ಯಕ್ಕಂತೂ ಫೇವರೆಬಲ್ ಅಗಿಲ್ಲ ಅನ್ನೋದು ಸತ್ಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.