ಬೈಕ್​ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು, ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆ

Edited By:

Updated on: Nov 11, 2023 | 8:02 PM

ಬೈಕ್​ಗಳ ನಡುವೇ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ (Madanayakanahalli) ಪೊಲೀಸ್ ಠಾಣ ವ್ಯಾಪ್ತಿಯ ಸಿದ್ದನಹೊಸಹಳ್ಳಿಯಲ್ಲಿ ನಡೆದಿದೆ. ಇನ್ನು ಈ ಅಪಘಾತದ(Accident) ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು, ನ.11: ಬೈಕ್​ಗಳ ನಡುವೇ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ (Madanayakanahalli) ಪೊಲೀಸ್ ಠಾಣ ವ್ಯಾಪ್ತಿಯ ಸಿದ್ದನಹೊಸಹಳ್ಳಿಯಲ್ಲಿ ನಡೆದಿದೆ. ಇನ್ನು ಈ ಅಪಘಾತದ(Accident) ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಲ್ಲಿ ಒಂದು ಬೈಕ್ ವೇಗವಾಗಿ ಬರುತ್ತದೆ, ಈ ವೇಳೆ ಎದುರುಗಡೆಯಿಂದ ಬರುವ ಟಿಟಿ ತಪ್ಪಿಸಲು ಹೋಗಿ ಪಕ್ಕದಲ್ಲಿ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕುಡಿತದ ಅಮಲಿನಲ್ಲಿದ್ದವನ ಅತೀಯಾಟಕ್ಕೆ ತಾನೂ ಸಾವನ್ನಪ್ಪಿದ್ದು, ‍ರಾಜಸ್ಥಾನ ಮೂಲದ ಕೂಲಿ‌ ಕಾರ್ಮಿಕನ ಪ್ರಾಣ ತೆಗೆದಿದ್ದಾನೆ. ಇಲ್ಲಿ ಸಾವನ್ನಪ್ಪಿರೋದು ಓರ್ವ ರಾಜಸ್ಥಾನ ಮೂಲದ ರಾಜೇಶ್ ಹಾಗೂ ಮತ್ತೊಬ್ಬ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ನಿವಾಸಿ ಧನರಾಜ್ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಅಂಬ್ಯೂಲನ್ಸ್ ಮುಖಾಂತರವಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹಗಳನ್ನು ಸಾಗಿಸಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

 

 

 

 

 

 

 

 

 

 

 

 

 

Published on: Nov 11, 2023 07:57 PM
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More