ನೋಡ ನೋಡುತ್ತಿದ್ದಂತೆ ನುಗ್ಗಿದ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್: ಕೂದಲೆಳೆ ಅಂತರದಲ್ಲಿ ಬಚಾವಾದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು
Chikodi News: ನೋಡ ನೋಡುತ್ತಿದ್ದಂತೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರೇಲರ್ ಪಿನ್ ಕಟ್ಟಾಗಿದ್ದು, ಕೂದಲು ಎಳೆ ಅಂತರದಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯ ಎಸ್‌ಎಂಎಸ್ ಕಾಲೇಜು ಬಳಿ ನಡೆದಿದೆ. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಚಿಕ್ಕೋಡಿ, ನವೆಂಬರ್ 22: ನೋಡ ನೋಡುತ್ತಿದ್ದಂತೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ (tractor) ಟ್ರೇಲರ್ ಪಿನ್ ಕಟ್ಟಾಗಿದ್ದು, ಕೂದಲು ಎಳೆ ಅಂತರದಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯ ಎಸ್‌ಎಂಎಸ್ ಕಾಲೇಜು ಬಳಿ ನಡೆದಿದೆ. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚಾಲಕನ ಗಮನಕ್ಕೆ ಬಾರದೆ ಹಿಂಬದಿಯ ಟ್ರೇಲರ್ ಪಿನ್ ಕಟ್ ಆಗಿ ರಸ್ತೆ ಪಕ್ಕಕ್ಕೆ ನುಗ್ಗಿದೆ. ಈ ವೇಳೆ ರಸ್ತೆ ಬದಿಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಂತಿದ್ದು, ಟ್ರ್ಯಾಕ್ಟರ್ ಟ್ರೇಲರ್ ನುಗ್ಗುತ್ತಿದ್ದಂತೆ ದಿಕ್ಕಾಪಾಲಾಗಿ ಓಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಎದೆ ಝಲ್ ಎನ್ನುವಂತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 22, 2023 10:39 PM