ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಕೊಠಡಿಯೊಂದರಲ್ಲಿ ರೈಲ್ವೆ ಕೂಲಿಗಳು ನಮಾಜ್; ವಿಡಿಯೋ ವೈರಲ್
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಕೊಠಡಿಯೊಂದರಲ್ಲಿ ರೈಲ್ವೇ ನಿಲ್ದಾಣದಲ್ಲಿರುವ ಕೂಲಿಗಳಿಗೆ ವಿಶ್ರಾಂತಿ ಪಡೆಯಲು ಮೀಸಲಿಡಲಾಗಿರುವ ಕೊಠಡಿಯಲ್ಲಿ ಸಿಬ್ಬಂದಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ 5 ರಲ್ಲಿ ಇರುವ ಕೊಠಡಿಯೊಂದರಲ್ಲಿ ರೈಲ್ವೆ ಕೂಲಿಗಳು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೇ ನಿಲ್ದಾಣದಲ್ಲಿರುವ ಕೂಲಿಗಳಿಗೆ ವಿಶ್ರಾಂತಿ ಪಡೆಯಲು ಮೀಸಲಿಡಲಾಗಿರುವ ಕೊಠಡಿಯಲ್ಲಿ ಸಿಬ್ಬಂದಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕೊಠಡಿಯೊಳಗೆ ಮುಸ್ಲಿಂ ಸಮುದಾಯದ ಕೂಲಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಕೊಠಡಿಯನ್ನು ಮಸೀದಿಯನ್ನಾಗಿ ಪರಿವರ್ತಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಡಿಯೋ ವೈರಲ್ ಹಿನ್ನಲೆ ರೈಲ್ವೆ ನಿಲ್ದಾಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಟೇಷನ್ ಮ್ಯಾನೇಜರ್ ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, ಡಿವಿಶನಲ್ ರೈಲ್ವೆ ಮ್ಯಾನೇಜರ್ಗೆ ಈ ಕುರಿತು ವರದಿ ಮಾಡುವೆ. ಜತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ಹಿಜಾಬ್ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿ; ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ರಿಟ್ ಅರ್ಜಿ
ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣ; ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ ಅಮಾನತು