ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್‌ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಕಿ ಸಮವಸ್ತ್ರ ಧರಿಸಿದ ಅಧಿಕಾರಿಯೊಬ್ಬರ ವಿರುದ್ಧವೇ ಅತ್ಯಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು 36 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ.
ಬೆಂಗಳೂರು, (ಅಕ್ಟೋಬರ್ 22): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಕಿ ಸಮವಸ್ತ್ರ ಧರಿಸಿದ ಅಧಿಕಾರಿಯೊಬ್ಬರ ವಿರುದ್ಧವೇ ಅತ್ಯಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು 36 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ. ದೂರುದಾರ ಮಹಿಳೆಯು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದು, ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವ ಆಮಿಷವೊಡ್ಡಿ ಕಳೆದ ಒಂದು ವರ್ಷದಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಮಹಿಳೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್
ಇನ್ನು ಇನ್ಸ್ ಪೆಕ್ಟರ್ ಹಾಗೂ ಮಹಿಳೆ ನಡುವೆ ನಡೆದ ವಾಟ್ಸಪ್ ಚಾಟ್ ಬಯಲಿಗೆ ಬಂದಿದ್ದು, ಇಬ್ಬರೂ ವಿಡಿಯೋ, ವಾಯ್ಸ್ ಕಾಲ್ ಮಾತನಾಡಿದ್ದಾರೆ. ಅಲ್ಲದೇ ಫೋಟೋ,ವಿಡಿಯೋ ಹಂಚಿಕೊಂಡು ಮುದ್ದು ಚಿನ್ನ ಎಂದು ಆತ್ಮೀಯವಾಗಿ ಚಾಟಿಂಗ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಗಂಭೀರ ಪ್ರಕರಣ ದಾಖಲಾಗಿರುವುದು ಇಲಾಖೆಗೆ ಮುಜುಗರ ತಂದಿದೆ.
ಹಣದ ಮೋಸದ ವಿಚಾರಕ್ಕೆ ಸ್ಟೇಷನ್ ಗೆ ಹೋಗಿದ್ದಾಗ ಆಯೇಶಾಳನ್ನ ಬಲೆಗೆ ಬೀಳಿಸಿಕೊಂಡಿದ್ದು, ವಾಟ್ಸಪ್ ಚಾಟಿಂಗ್ ಮೂಲಕ ಆಪ್ತರಾಗಿದ್ದಾರೆ. ಈಗಾಗಲೇ ಇನ್ಸ್ ಪೆಕ್ಟರ್ ಸುನಿಲ್ ಮದುವೆಯಾಗಿದ್ದರೂ ಸಹ ಇದೀಗ ಈ ಮಹಿಳೆಯನ್ನು ಮದ್ವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

