ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್​​​ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು

Updated on: Oct 22, 2025 | 12:12 PM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಕಿ ಸಮವಸ್ತ್ರ ಧರಿಸಿದ ಅಧಿಕಾರಿಯೊಬ್ಬರ ವಿರುದ್ಧವೇ ಅತ್ಯಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು 36 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ.

ಬೆಂಗಳೂರು, (ಅಕ್ಟೋಬರ್ 22): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಕಿ ಸಮವಸ್ತ್ರ ಧರಿಸಿದ ಅಧಿಕಾರಿಯೊಬ್ಬರ ವಿರುದ್ಧವೇ ಅತ್ಯಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು 36 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ. ದೂರುದಾರ ಮಹಿಳೆಯು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದು, ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವ ಆಮಿಷವೊಡ್ಡಿ ಕಳೆದ ಒಂದು ವರ್ಷದಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಮಹಿಳೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್

ಇನ್ನು ಇನ್ಸ್ ಪೆಕ್ಟರ್ ಹಾಗೂ ಮಹಿಳೆ ನಡುವೆ ನಡೆದ ವಾಟ್ಸಪ್ ಚಾಟ್ ಬಯಲಿಗೆ ಬಂದಿದ್ದು, ಇಬ್ಬರೂ ವಿಡಿಯೋ, ವಾಯ್ಸ್ ಕಾಲ್ ಮಾತನಾಡಿದ್ದಾರೆ. ಅಲ್ಲದೇ ಫೋಟೋ,ವಿಡಿಯೋ ಹಂಚಿಕೊಂಡು ಮುದ್ದು ಚಿನ್ನ ಎಂದು ಆತ್ಮೀಯವಾಗಿ ಚಾಟಿಂಗ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಗಂಭೀರ ಪ್ರಕರಣ ದಾಖಲಾಗಿರುವುದು ಇಲಾಖೆಗೆ ಮುಜುಗರ ತಂದಿದೆ.

ಹಣದ ಮೋಸದ ವಿಚಾರಕ್ಕೆ ಸ್ಟೇಷನ್​ ಗೆ ಹೋಗಿದ್ದಾಗ ಆಯೇಶಾಳನ್ನ ಬಲೆಗೆ ಬೀಳಿಸಿಕೊಂಡಿದ್ದು, ವಾಟ್ಸಪ್ ಚಾಟಿಂಗ್ ಮೂಲಕ ಆಪ್ತರಾಗಿದ್ದಾರೆ. ಈಗಾಗಲೇ ಇನ್ಸ್ ಪೆಕ್ಟರ್ ಸುನಿಲ್ ಮದುವೆಯಾಗಿದ್ದರೂ ಸಹ ಇದೀಗ ಈ ಮಹಿಳೆಯನ್ನು ಮದ್ವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.

Published on: Oct 22, 2025 12:06 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More