3 ಹೆಸರಲ್ಲಿ ಪ್ರೀತಿ, ಮದ್ವೆ ನಾಟಕ: ಯುವಕರಿಗೆ ಗಾಳ ಹಾಕುತ್ತಿದ್ದವಳು ಮಾಡಿದ್ದೇನು ಗೊತ್ತಾ?

Edited By:

Updated on: Feb 17, 2026 | 6:11 PM

ಯುವತಿಯೋರ್ವಳು ಮೂರ್ಮೂರು ಹೆಸರಿಟ್ಟುಕೊಂಡು ಯುವಕರನ್ನು ವಂಚಿಸಿದ್ದಾಳೆ ಎನ್ನುವ ಆರೋಪ (Accusation) ಕೇಳಿ ಬಂದಿದೆ. ಶ್ರೀಮಂತ ಹುಡುಗರಿಗೆ ಗಾಳ ಹಾಕ್ತಿದ್ದ ಐಶ್ವರ್ಯ ಎನ್ನುವ ಯುವತಿ, ಪ್ರೀತಿ (Love) ನಾಟಕವಾಡಿ ಯುವಕರಿಂದ ಹಣ ಪಡೆದು ವಂಚಿಸಿದ್ದಾಳಂತೆ. ಅದರಂತೆ ಐಶ್ವರ್ಯ, ಯುವಕನನ್ನು ಮದ್ವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾಳೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಳಂತೆ. ಸಂಜು ದೊಡಮನಿ ಹಾಗೂ ಗುರು ವಕ್ಕುಂದ ಸೇರಿದಂತೆ ಮೂವರು ಯುವಕರಿಗೆ ಮದುವೆಯ ಭರವಸೆ ನೀಡಿ ಹಣ ಪಡೆದುಕೊಂಡಿದ್ದಾಳೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ರೊಚ್ಚಿಗೆದ್ದ ಸ್ಥಳೀಯರು ರಸ್ತೆಯಲ್ಲೇ ಐಶ್ವರ್ಯಗೆ ಧರ್ಮದೇಟು ಕೊಟ್ಟಿದ್ದಾರೆ. ಈ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಧಾರವಾಡ, (ಫೆಬ್ರವರಿ 17): ಯುವತಿಯೋರ್ವಳು ಮೂರ್ಮೂರು ಹೆಸರಿಟ್ಟುಕೊಂಡು ಯುವಕರನ್ನು ವಂಚಿಸಿದ್ದಾಳೆ ಎನ್ನುವ ಆರೋಪ (Accusation) ಕೇಳಿ ಬಂದಿದೆ. ಶ್ರೀಮಂತ ಹುಡುಗರಿಗೆ ಗಾಳ ಹಾಕ್ತಿದ್ದ ಐಶ್ವರ್ಯ ಎನ್ನುವ ಯುವತಿ, ಪ್ರೀತಿ (Love) ನಾಟಕವಾಡಿ ಯುವಕರಿಂದ ಹಣ ಪಡೆದು ವಂಚಿಸಿದ್ದಾಳಂತೆ. ಅದರಂತೆ ಐಶ್ವರ್ಯ, ಯುವಕನನ್ನು ಮದ್ವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾಳೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಳಂತೆ. ಸಂಜು ದೊಡಮನಿ ಹಾಗೂ ಗುರು ವಕ್ಕುಂದ ಸೇರಿದಂತೆ ಮೂವರು ಯುವಕರಿಗೆ ಮದುವೆಯ ಭರವಸೆ ನೀಡಿ ಹಣ ಪಡೆದುಕೊಂಡಿದ್ದಾಳೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ರೊಚ್ಚಿಗೆದ್ದ ಸ್ಥಳೀಯರು ರಸ್ತೆಯಲ್ಲೇ ಐಶ್ವರ್ಯಗೆ ಧರ್ಮದೇಟು ಕೊಟ್ಟಿದ್ದಾರೆ. ಈ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ?

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More