ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪತಿ ಆತ್ಮಹತ್ಯೆ (Suicide) ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ (Bhadravati) ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (KSISF) ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗ, (ಫೆಬ್ರವರಿ 20): ಪತಿ ಆತ್ಮಹತ್ಯೆ (Suicide) ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ (Bhadravati) ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (KSISF) ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ವಾತಿ ಅವರು ಸಾಯುವ ಮುನ್ನ ತನ್ನ ತಾಯಿಗೆ ಮೆಸೇಜ್ ಮಾಡಿದ್ದು, ಅದರಲ್ಲಿ ಮೋಹನ್ ಎಂಬವರ ಹೆಸರನ್ನು ಉಲ್ಲೇಖಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಮೋಹನ್ ಎಂಬ ಪೊಲೀಸ್ ತನಗೆ ಮೆಸೇಜ್ ಮಾಡಿದ್ದರು. ಬ್ಲಾಕ್ ಮಾಡಿದ್ದಕ್ಕೆ, ಆತ ತನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂದು ಸ್ವಾತಿ ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಮೃತ ಸ್ವಾತಿ ತಾಯಿ ಸಹ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.
