ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

Edited By:

Updated on: Feb 20, 2026 | 8:20 PM

ಪತಿ ಆತ್ಮಹತ್ಯೆ (Suicide) ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ (Bhadravati) ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (KSISF) ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ, (ಫೆಬ್ರವರಿ 20): ಪತಿ ಆತ್ಮಹತ್ಯೆ (Suicide) ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ (Bhadravati) ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (KSISF) ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ವಾತಿ ಅವರು ಸಾಯುವ ಮುನ್ನ ತನ್ನ ತಾಯಿಗೆ ಮೆಸೇಜ್ ಮಾಡಿದ್ದು, ಅದರಲ್ಲಿ ಮೋಹನ್ ಎಂಬವರ ಹೆಸರನ್ನು ಉಲ್ಲೇಖಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಮೋಹನ್‌ ಎಂಬ ಪೊಲೀಸ್‌ ತನಗೆ ಮೆಸೇಜ್ ಮಾಡಿದ್ದರು. ಬ್ಲಾಕ್ ಮಾಡಿದ್ದಕ್ಕೆ, ಆತ ತನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂದು ಸ್ವಾತಿ ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಮೃತ ಸ್ವಾತಿ ತಾಯಿ ಸಹ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ: ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ?

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More